ಪುತ್ತೂರು, ಏ.29(DaijiworldNews/AA): ಕೆಲಸ ಕೊಡಿಸುವುದಾಗಿ ಆಮಿಷವೊಡ್ಡಿ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಕ್ಕೆ ಸಂಬಂಧಿಸಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಗೆ ಜಿಲ್ಲಾ ನ್ಯಾಯಾಲಯ ಜಾಮೀನು ಮಂಜೂರುಗೊಳಿಸಿದೆ.
ಆರೋಪಿ ಹರ್ಷಿತ್ ಎಂಬಾತನಿಗೆ ಜಾಮೀನು ಮಂಜೂರಾಗಿದೆ.
ಪುತ್ತೂರಿನ ಬನ್ನೂರು ಗ್ರಾಮದ ಬನ್ನೂರು ಬೈಲು ಎಂಬಲ್ಲಿನ ಬಾಡಿಗೆ ಮನೆಯೊಂದರಲ್ಲಿ ಮಾ. 13ರಂದು ಈ ಘಟನೆ ನಡೆದಿತ್ತು. ಈ ಘಟನೆಯ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿ ಕೊಂಡು ನಾಲ್ವರನ್ನು ಬಂಧಿಸಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಬಾಡಿಗೆ ಮನೆ ನೀಡಿ ಆಶ್ರಯ ನೀಡಿದ್ದ ಇನ್ನಿಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ನ್ಯಾಯಾಲಯ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿತ್ತು. ನ್ಯಾಯಾಂಗ ಬಂಧನದಲ್ಲಿರುವ ಆರೋಪಿಗಳ ಪೈಕಿ ಮನು ಯಾನೆ ಮನ್ವಿತ್ಗೆ ಆರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಈಗ ಮತ್ತೋರ್ವ ಪ್ರಮುಖ ಆರೋಪಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.