ಮಂಗಳೂರು, ಮೇ.4(DaijiworldNews/AA): ಮಂಗಳೂರು ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಕಚೇರಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಬಂದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ.
ಈ ಇ-ಮೇಲ್ ಉಗ್ರರ ಹೆಸರಲ್ಲಿ ಬಂದಿದ್ದು, ”ವಿಮಾನ ನಿಲ್ದಾಣದ ಆವರಣದಲ್ಲಿ ಆವರಣದಲ್ಲಿ ಸ್ಫೋಟಕಗಳನ್ನ ಇಡಲಾಗಿದೆ. ಮೂರು ವಿಮಾನದಲ್ಲಿಯೂ ಬಾಂಬ್ ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ದೊಡ್ಡಮಟ್ಟದ ರಕ್ತಪಾತ ನಡೆಯಲಿದೆ. ಈ ಕೃತ್ಯದ ಹಿಂದೆ ಟೆರರೈಸರ್ಸ್ 111 ಕೈವಾಡವಿದೆ” ಎಂದು ಬೆದರಿಕೆಯ ಸಂದೇಶ ಕಳುಹಿಸಿದ್ದಾರೆ.
ಏಪ್ರಿಲ್ 29 ರಂದು ಬೆದರಿಕೆಯ ಇ-ಮೇಲ್ ಬಂದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಸಂದೇಶ ಬಂದು ತಕ್ಷಣ ವಿಮಾನ ನಿಲ್ದಾಣದ ಅಧಿಕಾರಿಗಳು ಮಂಗಳೂರಿನ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹಿರಿಯ ಅಧಿಕಾರಿಗಳ ಸೂಚನೆ ಮೇರೆಗೆ ಬೆದರಿಕೆ ಸಂದೇಶದ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.