ಸುಳ್ಯ, ಮೇ 9 (DaijiworldNews/MS): ಹೊಟ್ಟೆನೋವೆಂದು ಆಸ್ಪತ್ರೆಗೆ ದಾಖಲಾದ 19 ವರ್ಷದ ಯುವಕ ಸಾವನ್ನಪ್ಪಿರುವ ಘಟನೆ ಬೆಳ್ಳಾರೆ ಠಾಣಾ ವ್ಯಾಪ್ತಿಯ ಕೊಡಿಯಾಲದಲ್ಲಿ ನಡೆದಿದೆ.
ಬೆಳ್ಳಾರೆ ಠಾಣಾ ವ್ಯಾಪ್ತಿಯ ಕೊಡಿಯಾಲದಲ್ಲಿ ನಡೆದಿದೆ. ಪೋನಡ್ಕ ಮನೆ ತಿಮ್ಮಪ್ಪ ಎಂಬವರ ಪುತ್ರ ನಿತಿನ್ ಕುಮಾರ್ (19) ಮೃತ ಯುವಕ. ಇನ್ನು ಯುವಕನ ಸಾವಿಗೆ ಖಾಸಗಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಬಗ್ಗೆ ನಿತಿನ್ ತಂದೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರುದಾಖಲಿಸಿದ್ದಾರೆ.