ಕಾಸರಗೋಡು, ಮೇ.11(DaijiworldNews/AA): ಅಕ್ರಮ ಗಣಿಗಾರಿಕೆ ವಿರುದ್ಧ ಮಂಜೇಶ್ವರ ತಾಲೂಕಿನ ಹಲವೆಡೆ ಮಂಜೇಶ್ವರ ಭೂದಾಖಲೆ ತಹಶೀಲ್ದಾರ್ ಕೆ.ಜಿ ಮೋಹನ್ ರಾಜ್ ರವರ ನೇತೃತ್ವದಲ್ಲಿ ಮಿಂಚಿನ ದಾಳಿ ನಡೆಸಲಾಗಿದ್ದು, 6 ವಾಹನಗಳನ್ನು ವಶ ಪಡಿಸಿಕೊಳ್ಳಲಾಗಿದೆ.
ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ರವರ ಆದೇಶದಂತೆ ದಾಳಿ ನಡೆಸಲಾಗಿದೆ. ಕಳೆದ ಒಂದು ವಾರದಿಂದ ಅಕ್ರಮ ಗಣಿಗಾರಿಕೆಗೆ ಸಂಬಂಧ ಪಟ್ಟಂತೆ 1 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಂಜೇಶ್ವರ ತಾಲೂಕಿನ ವಿವಿಧೆಡೆಗಳಲ್ಲಿ ಅಕ್ರಮವಾಗಿ ಹಲವಾರು ಗಣಿಗಾರಿಕೆಗಳು ನಡೆಯುತ್ತಿದ್ದು, ಮುಂದಿನ ದಿನಗಳಲ್ಲೂ ಅಕ್ರಮ ಗಣಿಗಾರಿಕೆ ವಿರುದ್ಧ ದಾಳಿ ಮುಂದುವರಿಯಲಿದೆ ಎಂದು ಜಿಲ್ಲಾಧಿಕಾರಿ ಕೆ. ಇಂಪಾಶೇಖರ್ ತಿಳಿಸಿದ್ದಾರೆ.