ಉಡುಪಿ, ಮೇ. 18(DaijiworldNews/AA): 15-ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ಮತ ಎಣಿಕೆ ಪ್ರಕ್ರಿಯೆಯು ಜೂನ್ 4 ರಂದು ಬೆಳಿಗ್ಗೆ 8 ಗಂಟೆಯಿಂದ ಉಡುಪಿ ನಗರದ ಬ್ರಹ್ಮಗಿರಿಯ ಸೈಂಟ್ ಸಿಸಿಲಿ ವಿದ್ಯಾಸಂಸ್ಥೆಯಲ್ಲಿ ನಡೆಯಲಿದೆ.
ಮತ ಎಣಿಕೆ ಕೇಂದ್ರಕ್ಕೆ ಭಾರತ ಚುನಾವಣಾ ಆಯೋಗದಿಂದ ನಿಯೋಜನೆಗೊಂಡ ಚುನಾವಣಾ ವೀಕ್ಷಕರು, ಚುನಾವಣಾಧಿಕಾರಿಗಳು, ಎಲ್ಲಾ ಸಹಾಯಕ ಚುನಾವಣಾಧಿಕಾರಿಗಳು, ಮತ ಎಣಿಕೆ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿ/ಸಿಬ್ಬಂದಿ, ಸ್ಪರ್ಧಿಸಿದ ಅಭ್ಯರ್ಥಿಗಳು ಅಥವಾ ಅವರ ಚುನಾವಣಾ ಏಜೆಂಟ್ ಮತ್ತು ಮತ ಎಣಿಕೆ ಏಜೆಂಟ್, ಭಾರತ ಚುನಾವಣಾ ಆಯೋಗದ ಅಧಿಕೃತ ಪರವಾನಿಗೆ ಪಡೆದ ಮಾಧ್ಯಮದವರಿಗೆ ಮಾತ್ರ ಪ್ರವೇಶಕ್ಕೆ ಅನುಮತಿಯಿರುತ್ತದೆ.
ಮತ ಎಣಿಕೆಗೆ ಸಂಬಂಧಿಸಿದ ಮಾಹಿತಿ ಪಡೆಯಲು ಮತ್ತು ದೂರು ದಾಖಲಿಸಲು #102, ಎ ಬ್ಲಾಕ್, ಜಿಲ್ಲಾಧಿಕಾರಿಯವರ ಕಛೇರಿ, ರಜತಾದ್ರಿ, ಮಣಿಪಾಲ, ಸಹಾಯವಾಣಿ: 1950, ದೂ. ಸಂಖ್ಯೆ: 0820-2574802 ವಿಶೇಷ ನಿಯಂತ್ರಣ ಕೊಠಡಿಯನ್ನು ಮತ ಎಣಿಕೆ ಆರಂಭಗೊಳ್ಳುವ 72 ಗಂಟೆ ಪೂರ್ವದಲ್ಲಿ ತೆರೆಯಲಾಗುತ್ತಿದ್ದು, ಸಾರ್ವಜನಿಕರು ದೂರವಾಣಿ ಮೂಲಕ ಅಥವಾ ನೇರವಾಗಿ ಆಗಮಿಸಿ ಮತ ಎಣಿಕೆಗೆ ಸಂಬಂಧಿಸಿದ ಅಗತ್ಯ ಮಾಹಿತಿಯನ್ನು ಪಡೆಯಬಹುದಾಗಿದೆ ಅಥವಾ ದೂರನ್ನು ದಾಖಲಿಸಬಹುದಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.