ಬೆಳ್ತಂಗಡಿ, ಮೇ.22 (DaijiworldNews/AA): ಶಾಸಕ ಹರೀಶ್ ಪೂಂಜಾ ಅವರನ್ನು ಬಂಧಿಸದೇ ಇರಲು ಪೊಲೀಸರು ನಿರ್ಧಾರ ಮಾಡಿದ್ದಾರೆ. ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗುವಂತೆ ಹೇಳಿ ಪೊಲೀಸರು ವಾಪಾಸ್ ಆಗಿದ್ದಾರೆ.
ಇಂದು ಶಾಸಕರ ನಿವಾಸದಲ್ಲಿ ಬೆಳಗ್ಗೆ ಆರಂಭವಾದ ಹೈಡ್ರಾಮಾಗೆ ಕೊನೆಗೂ ತೆರೆಬಿದ್ದಿದೆ. ಹರೀಶ್ ಪೂಂಜಾರನ್ನು ಬಂಧಿಸಲು ಇಂದು ಬೆಳಗ್ಗೆಯಿಂದಲೇ ಬೆಳ್ತಂಗಡಿ ಪೊಲೀಸರು ಅವರ ನಿವಾಸದಲ್ಲಿ ಠಿಕಾಣಿ ಹೂಡಿದ್ದಾರೆ. ಇದೀಗ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿ ತೆರಳಿದ್ದಾರೆ.
ಈ ಬಗ್ಗೆ ಮಾಧ್ಯಮದವರೊಂದಿಗೆ ಪ್ರತಿಕ್ರಿಯೆ ನೀಡಿದ ಹರೀಶ್ ಪೂಂಜಾ ಅವರು, ಪ್ರಕರಣದಲ್ಲಿ ಇಲ್ಲದ ಒಬ್ಬ ಅಮಾಯಕನನ್ನು ಬಂಧನವಾಗಿದೆ. ಬಿಜೆಪಿಯಲ್ಲಿ ಮುಂಚೂಣಿಯಲ್ಲಿ ಇದ್ದಾನೆ ಎಂದು ಬಂಧನ ಮಾಡಿದ್ದಾರೆ. ಅದನ್ನು ನಾನು ಜನ ಪ್ರತಿನಿಧಿಯಾಗಿ ಖಂಡಿಸಿರುವುದು. ದ್ವೇಷದ ರಾಜಕಾರಣ ಮಾಡಿದ್ರೆ ಒಪ್ಪುದಿಲ್ಲ ಎಂದು ಪೊಲೀಸರ ಮೂಲಕ ಸರ್ಕಾರಕ್ಕೆ ಎಚ್ಚರಿಕೆ ನೀಡಿರುವುದು. ಅದನ್ನೇ ನೆಪವಾಗಿ ಇಟ್ಟು ಮೂರು ಕೇಸ್ ಹಾಕಿದ್ದಾರೆ. ಅಧಿಕಾರಕ್ಕೆ ನಾನು ಪೊಲೀಸರಿಗೆ ಬೈದಿಲ್ಲ. ಸಿದ್ದರಾಮಯ್ಯ ಅಧಿಕಾರಕ್ಕಾಗಿ ಪೊಲೀಸ್ ಅಧಿಕಾರಿ ಶಂಕರ್ ಬಿದರಿ ಕಾಲರ್ ಪಟ್ಟಿ ಹಿಡಿದಿಲ್ವಾ. ಕಾರ್ಯಕರ್ತರ ಶಕ್ತಿಗಾಗಿ ಪೊಲೀಸರಿಗೆ ಬೈದದ್ದು ಅಧಿಕಾರಕ್ಕಾಗಿ ಅಲ್ಲ ಎಂದು ತಿಳಿಸಿದ್ದಾರೆ.
ಅಕ್ರಮ ಕಲ್ಲಿನ ಕೋರೆ ಪ್ರಕರಣದಲ್ಲಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿಧರ್ ಶೆಟ್ಟಿಯನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೂ ಶಶಿಧರ್ ಶೆಟ್ಟಿಗೂ ಯಾವುದೇ ಸಂಬಂಧವಿಲ್ಲ. ಉದ್ದೇಶಪೂರ್ವಕವಾಗಿ ಪ್ರಕರಣದಲ್ಲಿ ಸಿಲುಕಿಸಿದ್ದಾರೆ. ಈ ಕಾರಣಕ್ಕೆ ನಾನು ಪ್ರತಿಭಟಿಸಿದ್ದೆ. ಕಾಂಗ್ರೆಸ್ಗೆ ನೈತಿಕತೆ ಇಲ್ಲ. ಪೊಲೀಸರ ಮೇಲೆ ಹೆಚ್ಚಿನ ದೌಜನ್ಯ ಮಾಡಿರುವುದು ಕಾಂಗ್ರೆಸ್. ಬಿಜೆಪಿ ನಾಯಕರಿಗೆ ಬುದ್ದಿ ಹೇಳುವ ಅವಶ್ಯಕತೆ ಇಲ್ಲ. ತುರ್ತು ಪರಿಸ್ಥಿತಿಯಿಂದ ಹಿಡಿದು ಅವತಿನಿಂದ ಇವತ್ತಿನ ವರೆಗೆ ಪೊಲೀಸರನ್ನು ಹಿಡಿದುಕೊಂಡು ಕಾಂಗ್ರೆಸ್ ದೌಜನ್ಯ ಮಾಡುತ್ತಿದೆ. ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕಾಂಗ್ರೆಸ್ ಪ್ರತಿಭಟನೆ ಮಾಡಿತ್ತಲ್ವಾ. ಆವಾಗ ಯಾವ ನ್ಯಾಯ ಕಾನೂನು ಇತ್ತು. ಬಿಜೆಪಿ ಕಾರ್ಯಕರ್ತನಿಗೆ ಅನ್ಯಾಯ ಆದಾಗ ಪ್ರತಿಭಟನೆಗೆ ಅವಕಾಶ ನೀಡುವುದಿಲ್ಲ ಇದು ಯಾವ ನ್ಯಾಯ. ಎಂದು ಪ್ರಶ್ನೆ ಮಾಡಿದ್ದಾರೆ.