ಉಡುಪಿ, ಮೇ 25 (DaijiworldNews/MS): ಉಡುಪಿ-ಮಣಿಪಾಲ ನಡುವಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೇ 18ರಂದು ಎರಡು ತಂಡಗಳ ನಡುವೆ ಗ್ಯಾಂಗ್ ವಾರ್ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕಾಪು ಮೂಲದ ಎರಡು ತಂಡಗಳ ಯುವಕರು ಉಡುಪಿ ಮಣಿಪಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರುಗಳಲ್ಲಿ ಬಂದು ಜಗಳ ಮಾಡಿಕೊಂಡು ಕಾರಿನಲ್ಲಿಯೇ ಹೊಡೆದಾಟ ಮಾಡಿಕೊಂಡಿದ್ದಾರೆ.
ಮೇ 18ರಂದು ಉಡುಪಿ ಕುಂಜಿಬೆಟ್ಟುವಿನಲ್ಲಿ ನಡೆದಿರುವ ಈ ಘಟನೆ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಆರೋಪಿಗಳಿಗೆ ಜೂನ್ 1 ರ ವರೆಗೆ ನ್ಯಾಯಂಗ ಬಂಧನ ವಿಧಿಸಿದ್ದಾರೆ.
ಮೂಲಗಳ ಪ್ರಕಾರ, ಈ ಎರಡು ಗ್ಯಾಂಗ್ಗಳ ಮಧ್ಯೆ ಕಾರು ಮಾರಾಟಕ್ಕೆ ಸಂಬಂಧಿಸಿದಂತೆ ವಿವಾದವಿತ್ತು ಎನ್ನಲಾಗಿದೆ. ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
"ಘಟನೆ ನಡೆದ ದಿನ ಲಭ್ಯವಾದ ಮಾಹಿತಿಯ ಆಧಾರದ ಮೇಲೆ ಮೇ 20 ರಂದು ಎಫ್ಐಆರ್ ದಾಖಲಿಸಲಾಗಿದೆ. ವೀಡಿಯೊವನ್ನು ಆಧರಿಸಿ ಹೆಚ್ಚುವರಿ ಸೆಕ್ಷನ್ ಗಳನ್ನು ಸೇರಿಸಲಾಗುತ್ತದೆ.
ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು, ಉಳಿದವರು ತಲೆಮರೆಸಿಕೊಂಡಿದ್ದಾರೆ. ಬಂಧಿತರನ್ನು ಆಶಿಕ್ ಮತ್ತು ರಕೀಬ್, (ಇಬ್ಬರೂ ಗರುಡ ಗ್ಯಾಂಗ್ಗೆ ಸಂಬಂಧಿಸಿದವರು) ಎಂದು ಗುರುತಿಸಲಾಗಿದೆ. ಕೃತ್ಯಕ್ಕೆ ಬಳಸಿದ ಎರಡು ಸ್ವಿಫ್ಟ್ ಕಾರುಗಳು ಮತ್ತು ಎರಡು ಬೈಕ್ಗಳು, ಒಂದು ತಲ್ವಾರ್ ಮತ್ತು ಒಂದು ಡ್ರ್ಯಾಗರ್ ಅನ್ನು ವಶಪಡಿಸಿಕೊಳ್ಳಲಾಗಿದೆ" ಎಂದು ಉಡುಪಿ ಎಸ್ಪಿ ಡಾ.ಅರುಣ್ ಕೆ. ಹೇಳಿದ್ದಾರೆ