ಬೆಳ್ತಂಗಡಿ, ಮೇ 27 (DaijiworldNews/AA): ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ತನ್ನ ಮೇಲೆ ಗೌರವವಿದ್ದರೆ ಕೂಡಲೇ ಭಾರತಕ್ಕೆ ಬಂದು ತನಿಖಾಧಿಕಾರಿಗಳ ಮುಂದೆ ಹಾಜರಾಗು ಎಂದು ಪ್ರಜ್ವಲ್ ರೇವಣ್ಣಗೆ ಪತ್ರ ಬರೆದಿರೋ ಬಗ್ಗೆ ಗೊತ್ತಿಲ್ಲ ಎಂದು ಮಾಜಿ ಸಚಿವ ಎಚ್.ಡಿ.ರೇವಣ್ಣ ಹೇಳಿದರು.
ಇಂದು ಧರ್ಮಸ್ಥಳ ಮಂಜುನಾಥನ ಕ್ಷೇತ್ರಕ್ಕೆ ಆಗಮಿಸಿ, ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಳೆದ 40 ವರ್ಷಗಳಿಂದ ರಾಜಕಾರಣಿದಲ್ಲಿದ್ದೇನೆ. 25 ವರ್ಷಗಳ ಕಾಲ ಹೊಳೆನರಸೀಪುರದ ಶಾಸಕನಾಗಿ ಕೆಲಸ ಮಾಡಿದ್ದೇನೆ. ನನಗೆ ಕಾನೂನಿನ ಮೇಲೆ ಗೌರವವಿದೆ. ಹಾಗೂ ದೇವರ ಮೇಲೆ ನಂಬಿಕೆ ಇದೆ ಎಂದರು.
ತಮ್ಮ ವಿರುದ್ಧ ಮತ್ತು ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಪ್ರಕರಣಗಳು ನ್ಯಾಯಾಲಯದಲ್ಲಿ ಇರುವುದರಿಂದ ನಾನು ಯಾವುದಕ್ಕೂ ಪ್ರತಿಕ್ರಿಯೆ ನೀಡುವುದಿಲ್ಲ. ನನಗೆ ಮಂಜುನಾಥ ಸ್ವಾಮಿ ಮೇಲೆ ನಂಬಿಕೆಯಿದೆ. ಸೋಮವಾರದ ವಿಶೇಷ ದಿನ ಮಂಜುನಾಥ ಸ್ವಾಮಿ ದರ್ಶನ ಮಾಡಿದ್ದೇನೆ. ರಾಜ್ಯದ ಜನತೆ ಬಗ್ಗೆ, ನ್ಯಾಯಾಲಯದ ಮೇಲೆ ನನಗೆ ಅಪಾರ ನಂಬಿಕೆ ಇದೆ. ಇನ್ನು ಹಾಸನ ಚಲೋ ಕಾರ್ಯಕ್ರಮದ ಬಗ್ಗೆ ಗೊತ್ತಿಲ್ಲ ಎಂದು ಅವರು ತಿಳಿಸಿದರು.