ಉಡುಪಿ, ಮೇ 27 (DaijiworldNews/AK): ರಘುಪತಿ ಭಟ್ ತನ್ನ ಮೂಗಿನ ನೇರಕ್ಕೆ ಮಾತನಾಡುತ್ತಿದ್ದಾರೆ.ರಘುಪತಿ ಭಟ್ ಗೆ ಪಕ್ಷದಿಂದ ಯಾವತ್ತು ಅನ್ಯಾಯ ಆಗಿಲ್ಲ.ಅವರಿಗೆ ಸಾಕಷ್ಟು ಅವಕಾಶ ಸಿಕ್ಕಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು.
ನೈರುತ್ಯ ಪದವೀಧರ ಕ್ಷೇತ್ರದ ಶಿಕ್ಷಕರ ಕ್ಷೇತ್ರದ ಚುನಾವಣಾ ಪ್ರಚಾರ ನಡೆಸಿದ ಅವರು, ಈ ವೇಳೆ ಮಾಧ್ಯಮಕ್ಕೆ ಪತ್ರಿಕಿಯಿಸಿ, ರಘುಪತಿ ಭಟ್ ತನ್ನ ಮೂಗಿನ ನೇರಕ್ಕೆ ಮಾತನಾಡುತ್ತಿದ್ದಾರೆ.ರಘುಪತಿ ಭಟ್ ಗೆ ಪಕ್ಷದಿಂದ ಯಾವತ್ತು ಅನ್ಯಾಯ ಆಗಿಲ್ಲ.ಅವರಿಗೆ ಸಾಕಷ್ಟು ಅವಕಾಶ ಸಿಕ್ಕಿದೆ.ಅವಕಾಶ ಸಿಗಬೇಕಾದವರು ಅನೇಕ ಮಂದಿ ನಮ್ಮ ಪಕ್ಷದಲ್ಲಿದ್ದಾರೆ.ಸಿಕ್ಕವರಿಗೆ ಮತ್ತೆ ಮತ್ತೆ ಅವಕಾಶ ಸಿಗಬೇಕು ಅನ್ನೋದು ಸರಿಯಲ್ಲ. ರಘುಪತಿ ಭಟ್ ತಾನು ಗೆಲ್ಲುತ್ತೇನೆ ಎನ್ನುವ ಭ್ರಮೆಯಲ್ಲಿದ್ದಾರೆ. ಬಿಜೆಪಿ ಪಕ್ಷ ,ಸಂಘಟನೆ ಬಲಿಷ್ಠವಾಗಿದೆ.ಧನಂಜಯ್ ಸರ್ಜಿಯನ್ನು ದೊಡ್ಡ ಅಂತರದಲ್ಲಿ ಗೆಲ್ಲಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇದೇ ವೇಳೆ ಉಡುಪಿ, ದಕ್ಷಿಣ ಕನ್ನಡ ರಾಜ್ಯಾದ್ಯಂತ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ರಾಜ್ಯದಲ್ಲಿ ಚುನಾಯಿತ ಸರ್ಕಾರ ಇದೆ ಅನ್ನೋದನ್ನ ಜನ ಮರೆತಿದ್ದಾರೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೋಲಿಸ್ ಅಧಿಕಾರಿಗಳು, ಸರ್ಕಾರದ ಪ್ರತಿನಿಧಿಗಳು ವಿಫಲರಾಗಿದ್ದಾರೆ.ರಾಜ್ಯದಲ್ಲಿ ಯಾರು ಏನು ಬೇಕಾದರೂ ಮಾಡಬಹುದು ಅನ್ನೋ ವಾತಾವರಣ ನಿರ್ಮಾಣವಾಗಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಶಿಕ್ಷಣ ಸಚಿವರು ಶಿಸ್ತಿನಿಂದ ಇರಬೇಕು:
ಶಿಕ್ಷಣ ಸಚಿವ ಮಧು ಬಂಗಾರಪ್ಪ ನನ್ನ ಕ್ಷೌರಿಕನಿಗೆ ಪುರುಸೊತ್ತಿಲ್ಲ, ವಿಜಯೇಂದ್ರನೇ ಬಂದು ಹೇರ್ ಕಟ್ ಮಾಡಲಿ ಎಂದು ಹೇಳಿದ ಬಗ್ಗೆಉಡುಪಿಯಲ್ಲಿ ಮಾತನಾಡಿದ ಅವರು, ನಾನು ಹೇರ್ಕಟಿಂಗ್ ಬಗ್ಗೆ ಅಲ್ಲ.ಶಿಕ್ಷಣ ಸಚಿವರು ಶಿಸ್ತಿನಿಂದ ಇರಬೇಕು ಎಂದು ನಾನು ಹೇಳಿರುವುದು, ಶಿಕ್ಷಕರು, ಪೋಷಕರು, ಮಕ್ಕಳ ಅಭಿಪ್ರಾಯ ನನ್ನ ಅಭಿಪ್ರಾಯ ಅಲ್ಲ.ಕನ್ನಡ ಗೊತ್ತಿರುವವರು ಸಚಿವರಾದರೆ ರಾಜ್ಯಕ್ಕೂ ಮಕ್ಕಳ ಶಿಕ್ಷಣಕ್ಕೂ ಒಳಿತು.ಪಾಪ ಅವರು ಮನಸಿಗೆ ಬಹಳ ನೋವು ಮಾಡಿಕೊಂಡಂತಿದೆ. ನೋವು ಮಾಡಿಕೊಳ್ಳುವುದು ಬಿಟ್ಟು ಶಿಕ್ಷಣ ಕ್ಷೇತ್ರವನ್ನು ಉದ್ದಾರ ಮಾಡಿ ಶಿಕ್ಷಣವನ್ನು ಸರಿಯಾದ ದಾರಿಯಲ್ಲಿ ತೆಗೆದುಕೊಂಡು ಹೋಗುತ್ತಾರೆ ಅನ್ನೋ ನಂಬಿಕೆ ನನಗೆ ಇಲ್ಲ ಎಂದರು.
ಕನ್ನಡ ಬರುವುದಿಲ್ಲ ಎಂದು ಅವರೇ ಒಪ್ಪಿಕೊಂಡಿದ್ದಾರೆ.ಕನ್ನಡ ಗೊತ್ತಿರುವ, ಶಿಕ್ಷಣಕ್ಕೆ ಆದ್ಯತೆ ಕೊಡುವ ವ್ಯಕ್ತಿಗೆ ಅಧಿಕಾರ ಕೊಡಬೇಕು.ಇದರಿಂದ ಶಿಕ್ಷಣ ಕ್ಷೇತ್ರ ಮತ್ತು ನಮ್ಮ ನಾಡು ಉಳಿಯುತ್ತೆ.ಇದರಿಂದ ಮಕ್ಕಳ ಶಿಕ್ಷಣ ಉಳಿಯುತ್ತೆ, ಶಿಕ್ಷಣ ಕ್ಷೇತ್ರಕ್ಕೆ ತುಂಬಾ ಪಾವಿತ್ರತ್ಯತೆ ಇದೆ. ಶಿಕ್ಷಕರು,ಮಕ್ಕಳು ಶಿಸ್ತಿನಿಂದ ಶಾಲೆಗೆ ಬರಬೇಕು.ಹಾಗಾಗಿ ಶಿಕ್ಷಣ ಸಚಿವರು ನೀಟ್ ಆಗಿ ಶಿಸ್ತಿನಿಂದ ಇರಬೇಕು ಎಂದು ತಿರುಗೇಟು ನೀಡಿದರು.