ಬೆಳ್ತಂಗಡಿ, ಮೇ 28 (DaijiworldNews/ AK): ಅಕ್ರಮ ಗಣಿಗಾರೀಕೆ ಆರೋಪದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಗುರಿಯಾಗಿಸಿದ್ದನ್ನು ವಿರೋಧಿಸಿ ಪೊಲೀಸರ ವಿರುದ್ಧವೇ ಗುಡುಗಿದ್ದ ಶಾಸಕ ಹರೀಶ್ ವಿರುದ್ದ ದಾಖಲಾಗಿದ್ದ ಎರಡೂ ಪ್ರಕರಣಗಳ ತ್ವರಿತ ತನಿಖೆ ನಡೆಸಿದ ಪೊಲೀಸರು ಶಾಸಕರ ವಿರುದ್ಧ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಮೇ .28 ರಂದು ಚಾಜ್ಶೀಟ್ ಸಲ್ಲಿಕೆಯಾಗಿದೆ.
ಪ್ರಕರಣದ ತನಿಖೆಗಾಗಿ ಎಸ್.ಪಿ ಅವರಿಂದ ನಿಯೋಜಿಸಲ್ಪಟ್ಟ ವಿಶೇಷ ತನಿಖಾ ತಂಡದ ಮುಖ್ಯಸ್ಥರಾಗಿದ್ದ ಪುತ್ತೂರು ಪೊಲೀಸ್ ಇನ್ಸ್ಪೆಕ್ಟರ್ ಸತೀಶ್ ಜಿ.ಜೆ ಅವರು ಬೆಂಗಳೂರಿನ ನ್ಯಾಯಾಲಕ್ಕೆ ಈ ಆರೋಪ ಪಟ್ಟಿ ಸಲ್ಲಿಸಿದ್ದಾರೆ.
ಅಕ್ರಮ ಗಣಿಗಾರಿಕೆ ಮತ್ತು ಸ್ಪೋಟಕ ಕಾಯ್ದೆಯಡಿ ಬಂಧಿಸಲ್ಲಟ್ಟಿದ್ದ ಬಿಜೆಪಿಯ ಯುವ ಮೋರ್ಚಾದ ನಾಯಕರುಗಳಾದ ಶಶಿರಾಜ್ ಶೆಟ್ಟಿ ಮತ್ತು ಪ್ರಮೋಧ್ ಉಜಿರೆ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಯಿತು. ಬಂಧನವನ್ನು ಖಂಡಿಸಿ ಪೊಲೀಸ್ ರಾಣೆಯಲ್ಲಿ ನಡೆದ ಪ್ರತಿಭಟನೆ ವೇಳೆ ಶಾಸಕ ಹರೀಶ್ ಪೂಂಜ ಅವರು ಪೊಲೀಸ್ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು ಹಾಗೂ ನಿಂದಿಸಿದ್ದರು ಎಂದು ಒಂದು ಪ್ರಕರಣ ದಾಖಲಾಗಿತ್ತು.