ಕಾಸರಗೋಡು, ಮೇ 29(DaijiworldNews/AA): ಸಹಪಾಠಿಗಳ ಜೊತೆ ಸ್ನಾನಕ್ಕೆಂದು ನದಿಗೆ ಇಳಿದ ವಿದ್ಯಾರ್ಥಿ ಮುಳುಗಿ ಮೃತಪಟ್ಟ ಘಟನೆ ಕಾಸರಗೋಡು ಕಾಞ೦ಗಾಡ್ನ ಆರಾಯಿ ಎಂಬಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.
ಆರಾಯಿ ಬಾಕೋಟ್ನ ಬಿ.ಕೆ ಮುಹಮ್ಮದ್ ಸಿನಾನ್ (16) ಮೃತ ವಿದ್ಯಾರ್ಥಿ.
ಇಂದು ಬೆಳಗ್ಗೆ ತನ್ನ ಇಬ್ಬರು ಸ್ನೇಹಿತರೊಂದಿಗೆ ಮುಹಮ್ಮದ್ ಸಿನಾನ್ ಆರಾಯಿ ನದಿಗೆ ಸ್ನಾನಕ್ಕಿಳಿದಿದ್ದಾನೆ. ಈ ವೇಳೆ ಸುಳಿಗೆ ಸಿಲುಕಿದ ಆತ ನೀರುಪಾಲಾಗಿದ್ದಾನೆ. ಬಳಿಕ ಸ್ಥಳೀಯ ನಿವಾಸಿಗಳು ಶೋಧ ನಡೆಸಿ ಮೃತದೇಹವನ್ನು ಮೇಲಕ್ಕೆತ್ತಿದರು. ಜೊತೆಗಿದ್ದ ಇಬ್ಬರು ವಿದ್ಯಾರ್ಥಿಗಳು ಈಜಿ ದಡ ಸೇರಿದ್ದಾರೆ.
ಮೃತದೇಹವನ್ನು ಕಾಞ೦ಗಾಡ್ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು. ಇನ್ನು ಸಿನಾನ್ 10ನೇ ತರಗತಿ ವಿದ್ಯಾರ್ಥಿಯಾಗಿದ್ದನು ಎಂದು ತಿಳಿದುಬಂದಿದೆ.