ಮಂಗಳೂರು, ಜೂ. 04(DaijiworldNews/AA): ಚುನಾವಣಾ ಅಧಿಕಾರಿಗಳು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಹಾಗೂ ಉಡುಪಿ-ಚಿಕ್ಕಮಗಳೂರು ಸ್ಟ್ರಾಂಗ್ ರೂಮ್ ಓಪನ್ ಮಾಡಿದ್ದಾರೆ.
ಇಂದು ಬೆಳ್ಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ಸುರತ್ಕಲ್ ಎನ್ಐಟಿಕೆ ಕಾಲೇಜಿನಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯ ನಡೆಯಲಿದೆ. ಇನ್ನು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಮತ ಎಣಿಕೆ ಕಾರ್ಯವು ಉಡುಪಿಯ ಸೈಂಟ್ ಸಿಸಿಲೀಸ್ ಶಾಲೆಯಲ್ಲಿ ನಡೆಯಲಿದೆ.
ಈ ಕೇಂದ್ರಗಳಿಗೆ ತೆರಳುವ ಏಜೆಂಟ್ಗಳಿಗೆ ಸ್ಮಾರ್ಟ್ ವಾಚ್ ಹಾಕಿ ಒಳಗೆ ಹೋಗಲು ನಿರ್ಬಂಧ ಹೇರಲಾಗಿದೆ. ಇನ್ನು ಎಣಿಕೆ ಕೇಂದ್ರದಲ್ಲಿ ಮೊಬೈಲ್ ಬಳಕೆಯನ್ನು ನಿಷೇಧಿಸಲಾಗಿದೆ. ಜೊತೆಗೆ ಮತ ಎಣಿಕೆ ಮಾಡುವ ಅಧಿಕಾರಿಗಳು ಜೊತೆಗೆ ಏಜೆಂಟ್ಗಳು ಬ್ಯಾಗ್ಗಳನ್ನು ಒಳಗೆ ಕೊಂಡೊಯ್ಯುವಂತಿಲ್ಲ.