ಮಂಗಳೂರು, ಜೂ. 04(DaijiworldNews/AA): ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ 2ನೇ ಹಂತದ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರು ಮುನ್ನಡೆಯನ್ನು ಕಾಯ್ದುಕೊಂಡಿದ್ದಾರೆ.
ಎರಡನೇ ಹಂತದ ಇವಿಎಂ ಮತ ಎಣಿಕೆ ಪ್ರಕ್ರಿಯೆಯಲ್ಲಿ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟಗೆ 103703 ಮತ, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ 90199 ಮತ ಲಭಿಸಿದ್ದು, ಜಿಲ್ಲೆಯಲ್ಲಿ ನೋಟಕ್ಕೆ 3639 ಮತ ದೊರೆತಿದೆ. ಈ ಮೂಲಕ ಬಿಜೆಪಿ ಅಭ್ಯರ್ಥಿ ಚೌಟ ಅವರು 13,504 ಅಂತರದಲ್ಲಿ ಮುನ್ನಡೆ ಸಾಧಿಸಿದ್ದಾರೆ.