ಉಡುಪಿ, ಜೂ. 04(DaijiworldNews/AA): ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು 5ನೇ ಹಂತದ ಮತ ಎಣಿಕೆ ಪ್ರಕ್ರಿಯೆ ವೇಳೆಗೂ ಸತತವಾಗಿ ಮುನ್ನಡೆ ಸಾಧಿಸಿದ್ದಾರೆ.
ಬಿಜೆಪಿಯ ಕೋಟ ಶ್ರೀನಿವಾಸ ಪೂಜಾರಿ ಅವರು 2,30,610 ಮತಗಳನ್ನು, ಕಾಂಗ್ರೆಸ್ನ ಜಯಪ್ರಕಾಶ್ ಹೆಗ್ಡೆ ಅವರು 1,41,698 ಮತಗಳನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಬಿಜೆಪಿಯು 88,912 ಮತಗಳ ಅಂತರದಿಂದ ಮುನ್ನಡೆ ಸಾಧಿಸಿದೆ.
ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರವು ಚಿಕ್ಕಮಗಳೂರಿನ ತರೀಕೆರೆ, ಶೃಂಗೇರಿ, ಮೂಡಿಗೆರೆ ಹಾಗೂ ಉಡುಪಿ ಜಿಲ್ಲೆಯ ಕುಂದಾಪುರ, ಉಡುಪಿ ಕಾಪು, ಕಾರ್ಕಳ ವಿಧಾನಸಭೆ ಕ್ಷೇತ್ರಗಳನ್ನು ಒಳಗೊಂಡಿದೆ. ಈ ಕ್ಷೇತ್ರದಲ್ಲಿ ಒಟ್ಟು 9,63,738 ಮತದಾರರಿದ್ದು, ಈ ಪೈಕಿ 4,75,419 ಪುರುಷರು ಹಾಗೂ 4,88,284 ಮಹಿಳೆಯರಿದ್ದಾರೆ. ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಶೇ. 76.06ರಷ್ಟು ಮತದಾನವಾಗಿದೆ.