ಉಡುಪಿ, ಜೂ. 04(DaijiworldNews/AA): ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ 6ನೇ ಸುತ್ತಿನ ಮತ ಎಣಿಕೆ ವೇಳೆಗೆ ಬಿಜೆಪಿಯು 1,05,503 ಮತಗಳ ಅಂತರದೊಂದಿಗೆ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ.
6ನೇ ಸಿತ್ತಿನ ವೇಳೆಗೆ ಬಿಜೆಪಿಯ ಕೋಟ ಶ್ರೀನಿವಾಸ್ ಪೂಜಾರಿ ಅವರು 2,75,810 ಮತಗಳನ್ನು ಹಾಗೂ ಕಾಂಗ್ರೆಸ್ ನ ಜಯಪ್ರಕಾಶ್ ಹೆಗ್ಡೆ ಅವರು 1,70,307 ಮತಗಳನ್ನು ಪಡೆದುಕೊಂಡಿದ್ದಾರೆ. ಈ ಮೂಲಕ ಬಿಜೆಪಿಯು 1,05,503 ಮತಗಳ ಅಂತರವನ್ನು ಕಾಯ್ದುಕೊಂಡಿದೆ.
ಇನ್ನು ಕೋಟ ಶ್ರೀನಿವಾಸ್ ಪೂಜಾರಿ ಅವರು ಭಾರೀ ಮುನ್ನಡೆ ಸಾಧಿಸಿದ ಹಿನ್ನೆಲೆ ಉಡುಪಿ ಕಡಿಯಾಳಿಯಲ್ಲಿರುವ ಬಿಜೆಪಿ ಕಚೇರಿ ಮುಂಭಾಗದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಾಚರಣೆ ಮಾಡಿದ್ದಾರೆ.