ಉಡುಪಿ, ಜೂ. 07(DaijiworldNews/AK):ಶಾಲಾ ಕಾಲೇಜು ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಶ್ರೇಯಸ್ ನಾಯ್ಕ (25) ಕುಂದಾಪುರ ಯುವಕನನ್ನು ಜೂ.7ರಂದು ಬಂಧಿಸಲಾಗಿದೆ.
ಕುಂದಾಪುರ ಮೂಲದ ಉದ್ಯಮಿ ಶ್ರೇಯಸ್ ನಾಯ್ಕ (25) ಎಂಬಾತನ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದ್ದು, ತಲೆಮರೆಸಿಕೊಂಡಿದ್ದ.ಆರೋಪಿಯು ತನ್ನ ಪ್ರಭಾವಿ ಅಧಿಕಾರವನ್ನು ಬಳಸಿಕೊಂಡು ಹಲವಾರು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಕಳೆದ ಒಂದು ವರ್ಷದಿಂದ ಅಪ್ರಾಪ್ತ ಬಾಲಕಿಯ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಗರ್ಭಿಣಿಯಾಗುತ್ತಿದ್ದಂತೆ ವಿಷಯ ಬೆಳಕಿಗೆ ಬಂದಿದೆ.
ಆರೋಪಿ ವಿರುದ್ಧ ಮೇ 18ರಂದು ಪೋಕ್ಸೊ ಪ್ರಕರಣ ದಾಖಲಾಗಿತ್ತು. ಆರೋಪಿಯನ್ನು ಶೀಘ್ರದಲ್ಲೇ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.