ಸುಳ್ಯ, ಜೂ. 10 (DaijiworldNews/AK):ಬೆಳ್ಳಾರೆಯ ಎಪಿಎಂಸಿ ಬಳಿ ಮಹಿಳೆಯೊಬ್ಬರ ಶವವೊಂದು ಪತ್ತೆಯಾಗಿದೆ. ಮೇಲ್ನೋಟಕ್ಕೆ ಕಲ್ಲು ಎತ್ತಿ ಹಾಕಿ ಆಕೆಯನ್ನು ಯಾರಾದರೂ ಕೊಲೆ ಮಾಡಿರಬಹುದೇ ಅನ್ನುವ ಸಂಶಯ ವ್ಯಕ್ತವಾಗಿದೆ. ಆದರೆ ಈ ಬಗ್ಗೆ ಯಾವುದೇ ಖಚಿತ ಮಾಹಿತಿ ದೊರಕಿಲ್ಲ.
ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲಿಸಿದ್ದಾರೆ. ಮೃತ ಮಹಿಳೆಯನ್ನು ನಳಿನಿ ಎಂದು ಗುರುತಿಸಲಾಗಿದೆ. ಆಕೆ ಕಲ್ಲೋಣಿಯವರು ಎಂದು ಹೇಳಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ.