ಕಾಪು, ಜೂ. 14(DaijiworldNews/AA): ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ಠಾಣಾ ವ್ಯಾಪ್ತಿಯ ಮಲ್ಲಾರು ಚುಕ್ಕು ತೋಟದಲ್ಲಿ ಇಂದು ಮುಂಜಾನೆ ನಡೆದಿದೆ.
ಮಲ್ಲಾರು ಚುಕ್ಕು ತೋಟ ನಿವಾಸಿ ಮೊಹಿಸಿನಾ (34) ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಪತಿಯ ಮನೆಯಲ್ಲಿದ್ದ ಮೊಹಿಸಿನಾ ತಂದೆಯ ನಿಧನ ನಂತರ ಖಿನ್ನತೆಗೊಳಗಾಗಿದ್ದರು ಎನ್ನಲಾಗಿದೆ. ಅವರಿಗೆ 7 ವರ್ಷ ಮತ್ತು 1 ವರ್ಷ 9 ತಿಂಗಳ ಮಗು ಇದೆ. ಇನ್ನು ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.