ಸುಳ್ಯ, ಜೂ. 17(DaijiworldNews/AA): ಯುವಕನೋರ್ವನ ಮೃತದೇಹವು ಕೊಲೆಗೈದ ಸ್ಥಿತಿಯಲ್ಲಿ ಸುಳ್ಯ ಸಮೀಪದ ಶಾಲೆಯ ಜಗಲಿಯಲ್ಲಿ ಇಂದು ಬೆಳಗ್ಗೆ ಕಂಡುಬಂದಿದೆ.
ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಕಾಂತಮಂಗಲ ಸರ್ಕಾರಿ ಶಾಲಾ ಆವರಣದಲ್ಲಿ ಯುವಕನ ಮೃತದೇಹ ಪತ್ತೆಯಾಗಿದೆ. ಯುವಕನ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆಗೈದಿರುವುದು ಪತ್ತೆಯಾಗಿದೆ.
ಮೃತಪಟ್ಟ ಅಪರಿಚಿತ ಯುವಕ ಸುಮಾರು 25 ರಿಂದ 30 ವರ್ಷದವನೆಂದು ಊಹಿಸಲಾಗಿದೆ.
ಘಟನಾ ಸ್ಥಳಕ್ಕೆ ಸುಳ್ಯ ವೃತ್ತ ನಿರೀಕ್ಷಕ ಸತ್ಯನಾರಾಯಣ, ಸೇರಿದಂತೆ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇನ್ನು ಕಳೆದ ಭಾನುವಾರವಷ್ಟೇ ಬೆಳ್ಳಾರೆ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯ ಕೊಲೆ ನಡೆದಿತ್ತು. ಈ ಮಹಿಳೆಯ ತಲೆಗೆ ಕಲ್ಲು ಎತ್ತಿ ಹಾಕಿ ಕೊಲೆಗೈಯಲಾಗಿತ್ತು. ಜೊತೆಗೆ ಪ್ರಕರಣದ ಆರೋಪಿಯನ್ನು ಬಂಧಿಸಲಾಗಿತ್ತು.