ಉಪ್ಪಿನಂಗಡಿ, ಜೂ. 17(DaijiworldNews/AA): ಮಹಿಳೆಯೋರ್ವರು ಮೃತಪಟ್ಟಿದ್ದು, ಕೊಲೆ ಶಂಕೆ ವ್ಯಕ್ತವಾದ ಘಟನೆ ಉಪ್ಪಿನಂಗಡಿಯ ಪೆರ್ನೆ ಬಳಿಯ ಬಿಳಿಯೂರು ದರ್ಖಾಸ್ ಎಂಬಲ್ಲಿ ನಡೆದಿದೆ.
ಹೇಮಾವತಿ (37) ಮೃತ ಮಹಿಳೆ.
ಹೇಮಾವತಿ ಅವರು ತಾಯಿ, ಅಕ್ಕನ ಮಗನೊಂದಿಗೆ ಈ ಮನೆಯಲ್ಲಿದ್ದ ವೇಳೆ ಭಾನುವಾರ ರಾತ್ರಿ ಘಟನೆ ನಡೆದಿದೆ. ಮೊದಲಿಗೆ ಸ್ಥಳೀಯ ಪರಿಸರದಲ್ಲಿ ಹೃದಯಾಘಾತವೆಂಬ ಸುದ್ದಿ ಹರಡಿತ್ತು. ಬಳಿಕ ಈ ಕುರಿತು ಶಂಕೆ ವ್ಯಕ್ತವಾಗಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಪೊಲೀಸರು ವಿಚಾರಣೆಗಾಗಿ ಮೃತರ ಅಕ್ಕನ ಮಗ ಎಸೆಸೆಲ್ಸಿ ಓದುತ್ತಿರುವ ಅಪ್ರಾಪ್ತ ಬಾಲಕನನ್ನು, ಆತನ ತಂದೆ ಶಂಕರ ಎಂಬುವವರನ್ನು ಕರೆದೊಯ್ದಿದ್ದಾರೆ. ಮೃತರು ಹೊಟೇಲ್ ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಇನ್ನು ಈ ಬಗ್ಗೆ ಪೊಲೀಸರ ತನಿಖೆ ಬಳಿಕವಷ್ಟೇ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.