ಪುತ್ತೂರು, ಜೂ 27 (DaijiworldNews/MS): ಪುತ್ತೂರು ಬನ್ನೂರಿನ ಜೈನರಗುರಿ ಸಮೀಪ ಮಜೀದ್ ಎಂಬರ ಮನೆ ಮೇಲೆ ಧರೆ ಕುಸಿದ ಪರಿಣಾಮ ಮನೆ ಹಾನಿಗೊಂಡ ಮತ್ತು ನಿದ್ದೆಯಲ್ಲಿದ್ದ ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿದ ಘಟನೆ ಜೂ.27 ರ ನಸುಕಿನ ಜಾವ ನಡೆದಿದೆ. ಮಜೀದ್ ಮತ್ತು ಇಬ್ಬರು ಮಲಗಿದ್ದ ಕೊಠಡಿ ಮೇಲೆ ಧರೆ ಕುಸಿದು ಬಿದ್ದಿದೆ.
ಮಣ್ಣು ಬಿದ್ದ ಪರಿಣಾಮ ಮನೆಯ ಅರ್ಧ ಭಾಗ ಕುಸಿದು ಹಾನಿದು ಹಾನಿಯಾಗಿದೆ. ಈ ವೇಳೆ ಇಬ್ಬರು ಮಕ್ಕಳು ಮಣ್ಣಿನಡಿಗೆ ಸಿಲುಕಿದ್ದು ತಕ್ಷಣ ಎಚ್ಚೆತ್ತು ಮನೆಯವರು ಹಾಗೂ ಸ್ಥಳೀಯರು ಕಾರ್ಯಾಚರಣೆ ನಡೆಸಿ ಇಬ್ಬರು ಮಕ್ಕಳನ್ನ ಪಾರು ಮಾಡಿದ್ದಾರೆ. ಬೆಳಗ್ಗಿನ ಜಾವ 4 ಗಂಟೆಗೆ ಧರೆ ಕುಸಿದು ಬಿದ್ದಿದ್ದು, ಗಾಯಗೊಂಡ ಇಬ್ಬರು ಮಕ್ಕಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ
ಘಟನಾ ಸ್ಥಳಕ್ಕೆ ನಗರಸಭಾ ಸದಸ್ಯರಾದ ಪಾತಿಮಾತ್ ಜೋರಾ, ಪಿ ಜಿ ಜಗನ್ನಿವಾಸ ರಾವ್, ಪೌರಾಯುಕ್ತ ಮಧು ಎಸ್ ಮನೋಹರ್ , ಕಂದಾಯ ನಿರೀಕ್ಷರು ಭೇಟಿ ನೀಡಿದರು.