ಮಂಗಳೂರು/ಉಡುಪಿ, ಜೂ 27 (DaijiworldNews/ AK): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಹಾಗೂ ಪ್ರವಾಹದ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಜೂನ್ 28 ಶುಕ್ರವಾರದಂದು ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಮುಂದುವರೆಯಲಿದೆ ಎಂದು ಜಿಲ್ಲಾಡಳಿತ ಘೋಷಿಸಿದೆ. ಜೂನ್ 27ರಂದು ಕೂಡ ಭಾರೀ ಮಳೆಯಿಂದಾಗಿ ಶಾಲೆಗಳಿಗೆ ರಜೆ ನೀಡಲಾಗಿತ್ತು.ಮುಂಜಾಗ್ರತಾ ಕ್ರಮವಾಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಮಾತ್ರ ರಜೆ ಘೋಷಿಸಲಾಗಿದ್ದು, ಕಾಲೇಜುಗಳಿಗೆ ರಜೆ ಘೋಷಿಸಿಲ್ಲ.
ಉಡುಪಿಯಲ್ಲಿ ರಜೆ ಇಲ್ಲ: ಡಿಸಿ
ಉಡುಪಿಯಲ್ಲಿ ರೆಡ್ ಅಲರ್ಟ್ ಘೋಷಿಸಿದ್ದರೂ ನಿರೀಕ್ಷಿತ ಮಳೆಯಾಗಿಲ್ಲ. ಹೀಗಾಗಿ ಜೂನ್ 28ರಂದು ಶಾಲಾ-ಕಾಲೇಜುಗಳಿಗೆ ಎಂದಿನಂತೆ ತರಗತಿಗಳು ನಡೆಯಲಿದ್ದು, ರಜೆ ಘೋಷಿಸಿಲ್ಲ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸ್ಪಷ್ಟಪಡಿಸಿದ್ದಾರೆ.
ಬುಧವಾರ ಬೆಳಗ್ಗೆಯಿಂದ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸುವಂತೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.