ಮಂಗಳೂರು, ಜೂ.30(DaijiworldNews/AA): ದ.ಕ. ಜಿಲ್ಲೆಯ ಮಾಜಿ ಜಿಲ್ಲಾಧಿಕಾರಿ, ತಮಿಳುನಾಡಿನ ತಿರುವಳ್ಳೂರು ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಸಂಸದರಾಗಿ ಆಯ್ಕೆಯಾದ ಸಸಿಕಾಂತ್ ಸೆಂಥಿಲ್ ಅವರನ್ನು ಮಾಜಿ ಸಚಿವ ಬಿ.ರಮಾನಾಥ ರೈ ಅವರು ಶನಿವಾರ ದೆಹಲಿಯ ತಮಿಳುನಾಡು ಭವನದಲ್ಲಿ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭ ಕೆಪಿಸಿಸಿ ಸದಸ್ಯ ಪಿಯೂಸ್ ರೋಡ್ರಿಗಸ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಬ್ಬೀರ್.ಎಸ್. ಉಪಸ್ಥಿತರಿದ್ದರು.