ಮಣಿಪಾಲ, ಜು.01(DaijiworldNews/AA): ವ್ಯಕ್ತಿಯೊಬ್ಬರ ಖಾತೆಯಿಂದ ಮತ್ತೊಂದು ಖಾತೆಗೆ 2,08,004 ರೂ. ಹಣ ವರ್ಗಾವಣೆಗೊಂಡಿರುವ ಘಟನೆ ನಡೆದಿದೆ.
ಕಾರ್ಕಳ ಪಳ್ಳಿ ನಿವಾಸಿ ಡಾ| ಗೋಪಿ ನಾಥ್ ಅವರ ಬ್ಯಾಂಕ್ ಖಾತೆಯಿಂದ ಜನವರಿ 27ರಿಂದ ಜೂನ್ 20ರ ವರೆಗೆ ಸುಮಾರು 2,08,004ರೂ. ವರ್ಗಾವಣೆಗೊಂಡಿದೆ. ಸುಮಾರು 177 ಬಾರಿ ಬೇರೆ ಬೇರೆ ಕಂತು ಗಳಲ್ಲಿ ಹಣ ವರ್ಗಾವಣೆಯಾಗಿರುವುದು ತಿಳಿದುಬಂದಿದೆ.
ಈ ಬಗ್ಗೆ ಸಂಬಂಧ ಪಟ್ಟ ಬ್ಯಾಂಕ್ಗೆ ಹೋಗಿ ಅಧಿಕಾರಿಗಳನ್ನು ವಿಚಾರಿಸಿದಾಗ ಒಟಿಪಿ-ಡೆಬಿಟ್ ಕಾರ್ಡ್ ಮೂಲಕ ಹಣ ವರ್ಗಾ ವಣೆಯಾಗಿದೆ ಎಂದಿದ್ದಾರೆ. ಬಳಿಕ ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿರುವ ಅವರು, ನನಗೆ ಹಣ ವರ್ಗಾವಣೆಗೆ ಸಂಬಂಧಪಟ್ಟ ಯಾವುದೇ ಒಟಿಪಿ ಅಥವಾ ಸಂದೇಶಗಳು ಬಂದಿಲ್ಲ. ಯಾರೋ ಅಪರಿಚಿತ ವ್ಯಕ್ತಿ ನನ್ನ ಗಮನಕ್ಕೆ ಬಾರದಂತೆ ಖಾತೆಯಿಂದ ಅಕ್ರಮವಾಗಿ ಹಣ ವರ್ಗಾಯಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.