ಮಂಗಳೂರು, ಮೇ 15 (Daijiworld News/SM): ವಿದೇಶಿ ಮೂಲದ 24 ಕ್ಯಾರೆಟ್ ಚಿನ್ನಾಭರಣವನ್ನು ಅಕ್ರಮವಾಗಿ ಸಾಗಾಟ ನಡೆಸುತ್ತಿರುವುದನ್ನು ಪತ್ತೆ ಹಚ್ಚಿರುವ ಮಂಗಳೂರು ವಿಮಾನ ನಿಲ್ದಾಣದ ಕಷ್ಟಮ್ಸ್ ಅಧಿಕಾರಿಗಳು ಆರೋಪಿಯನ್ನು ಬಂಧಿಸಿರುವ ಘಟನೆ ಮೇ 14ರ ಬುಧವಾರದಂದು ನಡೆದಿದೆ.
ಬಂಧಿತ ಆರೋಪಿಯಿಂದ ಸುಮಾರು 34.75 ಲಕ್ಷ ರೂ. ಮೌಲ್ಯದ 1052.90 ಗ್ರಾಂ ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ದುಬೈಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿ ಪ್ರಯಾಣಿಕನೊಬ್ಬ ಅಕ್ರಮವಾಗಿ ಚಿನ್ನ ಸಾಗಾಟ ನಡೆಸುತ್ತಿದ್ದ. ಪ್ರಯಾಣಿಕರನ್ನು ತಪಾಸಣೆ ನಡೆಸುವ ವೇಳೆ ಆರೋಪಿ ಅಕ್ರಮವಾಗಿ ಮಿಕ್ಸರ್ ಗ್ರೈಂಡರಲ್ಲಿ ಚಿನ್ನ ಸಾಗಾಟ ನಡೆಸುತ್ತಿರುವುದು ಪತ್ತೆಯಾಗಿದೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆದ ಅಧಿಕಾರಿಗಳು ಪೊಲೀಸರಿಗೆ ಹಸ್ತಾಂತರಿಸಿದ್ದು ವಿಚಾರಣೆ ಮುಂದುವರೆದಿದೆ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.