ಉಡುಪಿ,ಜು 04 (DaijiworldNews/ AK): ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ತಗ್ಗು ಪ್ರದೇಶಗಳಲ್ಲಿ ನೆರೆ ಭೀತಿ ಎದುರಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೆ .ವಿದ್ಯಾ ಕುಮಾರಿಯವರು ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಈ ಮೊದಲು ಜಿಲ್ಲೆಯ ಎರಡು ತಾಲೂಕುಗಳಿಗೆ ಮಾತ್ರ ರಜೆ ಘೋಷಿಸಲಾಗಿತ್ತು. ಆದರೆ ಇದೀಗ ಡುಪಿ ಜಿಲ್ಲೆ ಯಾದ್ಯಂತ ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೆ .ವಿದ್ಯಾ ಕುಮಾರಿಯವರು ರಜೆ ಘೋಷಿಸಿ ಆದೇಶಿಸಿದ್ದಾರೆ.
ಪದವಿ, ಸ್ನಾತಕೊತ್ತರ ಪದವಿ, ಡಿಪ್ಲೋಮೋ ,ಇಂಜಿನಿಯರಿಂಗ್ , ಐಟಿಐ ವಿದ್ಯಾಸಂಸ್ಥೆಗಳಿಗೆ ರಜೆ ಇಲ್ಲ ಎಂದು ತಿಳಿಸಿದ್ದಾರೆ.
ಭಾರತೀಯ ಹವಾಮಾನ ಇಲಾಖೆ ಮುಂದಿನ ಎರಡು ದಿನಗಳಲ್ಲಿ, ಜುಲೈ 6 ಮತ್ತು 7, ರಂದು ಕರಾವಳಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ರೆಡ್ ಅಲರ್ಟ್ ಸೂಚಿಸಿದೆ.