ಮಂಗಳೂರು, ಜು 06(DaijiworldNews/MS): ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಹಾಗೂ ಹವಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆಯಾದ ದ.ಕ.ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ , ಪ್ರೌಢ ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜು.6ರಂದು ರಜೆ ಘೋಷಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂನೆಯಂತೆ ರೆಡ್ ಆಲರ್ಟ್ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಮುನ್ನಚ್ಚರಿಕಾ ಕ್ರಮವಾಗಿ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ಸಾರಲಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.