ಬಂಟ್ವಾಳ, ಜು.06(DaijiworldNews/AA): ನಾಪತ್ತೆಯಾಗಿದ್ದ ಆಟೋ ರಿಕ್ಷಾ ಚಾಲಕ ಗಿರೀಶ್ (37) ಅವರ ಮೃತದೇಹ ಶುಕ್ರವಾರ ಸಂಜೆ ಫಲ್ಗುಣಿ ನದಿಯಲ್ಲಿ ಪತ್ತೆಯಾಗಿದೆ.
ಗಿರೀಶ್ ಗುರುವಾರ ಮುಂಜಾನೆ ಬಾಡಿಗೆ ಹೋಗಲು ಇದೆ ಎಂದು ಹೇಳಿ ಮನೆಯಿಂದ ತೆರಳಿದ್ದು, ಈ ವೇಳೆ ಗಸ್ತುನಲ್ಲಿದ್ದ ಪೊಲೀಸರು ಪೊಳಲಿ ಸೇತುವೆ ಮೇಲೆ ರಿಕ್ಷಾ ಒಂದು ಅಡ್ಡವಾಗಿ ನಿಂತಿದ್ದನ್ನು ಗಮನಿಸಿದ್ದಾರೆ. ಬಳಿಕ ಪರಿಶೀಲನೆ ನಡೆಸಿದ ಪೊಲೀಸರು ರಿಕ್ಷಾದಲ್ಲಿ ಯಾರೂ ಇಲ್ಲದೇ ಇರುವುದರಿಂದ ಗಿರೀಶನ ಮನೆಗೆ ಮಾಹಿತಿ ತಿಳಿಸಿದ್ದಾರೆ. ಇನ್ನು ಗಿರೀಶ್ ಅಡ್ಡೂರು-ಪೊಳಲಿ ಸೇತುವೆಯ ಮೇಲೆ ವಾಹನ ನಿಲ್ಲಿಸಿ ಫಲ್ಗುಣಿ ನದಿಗೆ ಹಾರಿದ್ದಾರೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
ಗಿರೀಶ್ ಅವರ ಮೃತದೇಹವು ಅಡ್ಡೂರಿನ ಕೆಳಗಿನಕೆರೆಯಲ್ಲಿ ಪತ್ತೆಯಾಗಿದೆ. ಮೃತರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ. ಗಿರೀಶ್ ಅವರ ಆತ್ಮಹತ್ಯೆಗೆ ಕಾರಣ ಇನ್ನು ತಿಳಿದುಬಂದಿಲ್ಲ.