ಮಂಗಳೂರು, ಜು.07(DaijiworldNews/AK): ಉಳಾಯಿಬೆಟ್ಟುವಿನ ಪೆರ್ಮಂಕಿಯಲ್ಲಿರುವ ಉದ್ಯಮಿ ಪದ್ಮನಾಭ ಕೋಟ್ಯಾನ್ ಅವರ ಮನೆಯಲ್ಲಿ ನಡೆದ ದರೋಡೆ ಪ್ರಕರಣದ ಪ್ರಮುಖ ಆರೋಪಿ ನೀರುಮಾರ್ಗ ಗ್ರಾಮ ಪಂಚಾಯಿತಿಯ ಕಾಂಗ್ರೆಸ್ ಬೆಂಬಲಿತ ಸದಸ್ಯ ವಸಂತ್ ಅವರನ್ನುಪಕ್ಷದಿಂದ ಅಮಾನತುಗೊಳಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಆದೇಶಿಸಲಾಗಿದೆ.
ಗುರುಪುರ ಬ್ಲಾಕ್ ಕಾಂಗ್ರೆಸ್ ಸಮಿತಿ , "ಪಕ್ಷದ ನಿಯಮಗಳು ಮತ್ತು ನಿಬಂಧನೆಗಳನ್ನು ಉಲ್ಲಂಘಿಸಿದ ಮತ್ತು ಪಕ್ಷದ ಸ್ಥಾನಮಾನ ಮತ್ತು ಗೌರವಕ್ಕೆ ಧಕ್ಕೆ ತಂದಿದ್ದಕ್ಕಾಗಿ ವಸಂತ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ ಪ್ರಕಟನೆಯಲ್ಲಿ ತಿಳಿಸಲಾಗಿದೆ.