ಉಡುಪಿ, ಜು.07(DaijiworldNews/AK): ನಿರ್ಮಾಣ ಹಂತದಲ್ಲಿರುವ ಕಟ್ಟಡಗಳು ಮತ್ತು ಇತರೆ ನಿವೇಶನಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವಂತೆ ನಿರ್ಮಾಣ ಕಂಪನಿಗಳಿಗೆ ಡಿಸಿ ವಿದ್ಯಾಕುಮಾರಿ ಸೂಚಿಸಿದ್ದಾರೆ.
ಎಲ್ಲಾ ಕಟ್ಟಡ ನಿರ್ಮಾಣ ಕಂಪನಿಗಳು ಸೈಟ್ಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಸುರಕ್ಷತೆಯ ಜವಾಬ್ದಾರಿಯನ್ನು ಹೊಂದಿದ್ದು, ವಿಶೇಷವಾಗಿ ಮಳೆಗಾಲದಲ್ಲಿ ಅವರು ಸೂಕ್ತ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂದು ಡಿಸಿ ಸೂಚಿಸಿದ್ದಾರೆ.
ಯಾವುದೇ ಭೂಕುಸಿತ, ಅಪಘಾತ ಅಥವಾ ಇತರ ಅವಘಡಗಳನ್ನು ತಡೆಗಟ್ಟಲು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಯಾವುದೇ ಕಾರ್ಮಿಕ ಜೀವ ಕಳೆದುಕೊಳ್ಳಬಾರದು. ಮುನ್ನೆಚ್ಚರಿಕೆ ವಹಿಸಲು ಸಾಧ್ಯವಾಗದಿದ್ದರೆ, ಅಂತಹ ಕಾಮಗಾರಿಗಳನ್ನು ತಕ್ಷಣವೇ ನಿಲ್ಲಿಸಬೇಕು ಎಂದು ಎಚ್ಚರಿಸಿದ್ದಾರೆ.
ಕಟ್ಟಡ ನಿರ್ಮಾಣ ಅಥವಾ ಇತರ ಯಾವುದೇ ಕೆಲಸ ಮಾಡುವಾಗ ಕಾರ್ಮಿಕರ ಜೀವ ಕಳೆದುಕೊಂಡರೆ, ಕಟ್ಟಡದ ಕಾನೂನಿನ ಪ್ರಕಾರ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಉಲ್ಲಂಘನೆಯ ಸಂದರ್ಭದಲ್ಲಿ ನ್ಯಾಯಾಲಯವು ಮೂರು ತಿಂಗಳ ಜೈಲು ಶಿಕ್ಷೆ ಅಥವಾ ದಂಡವನ್ನು ವಿಧಿಸುತ್ತದೆ. ಆದ್ದರಿಂದ ಕಟ್ಟಡ ನಿರ್ಮಾಣ ಮಾಡುವ ಸ್ಥಳದಲ್ಲಿ ಕಾರ್ಮಿಕರ ಸುರಕ್ಷತೆಯನ್ನು ಬಿಲ್ಡರ್ಗಳು ಮತ್ತು ಗುತ್ತಿಗೆದಾರರು ಖಚಿತಪಡಿಸಿಕೊಳ್ಳಬೇಕು ಪ್ರಕಟನೆಯಲ್ಲಿ ಹೇಳಿದ್ದಾರೆ.