ಮಂಗಳೂರು,ಜು. 09(DaijiworldNews/AK): ಎಡೆಬಿಡದೆ ಸುರಿಯುತ್ತಿರುವ ಮಳೆಯು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಅಪಾರ ಹಾನಿಯನ್ನುಂಟು ಮಾಡಿದೆ. ಜಿಲ್ಲೆಯಲ್ಲಿ ಭಾರೀ ಮಳೆಯಾಗಿದ್ದು, ಉಜಿರೆಯಲ್ಲಿ 142 ಮಿಮೀ ಮಳೆ ದಾಖಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಜುಲೈ 9ರಂದು ಜಿಲ್ಲೆಯ ಶಾಲಾ-ಕಾಲೇಜುಗಳಿಗೂ ರಜೆ ಘೋಷಿಸಲಾಗಿತ್ತು.
ಬೆಳ್ತಂಗಡಿ ತಾಲೂಕಿನ ಕಲ್ಲೇರಿಯಲ್ಲಿ ಶಾಲೆಯ ಕಾಂಪೌಂಡ್ ಗೋಡೆ ಕುಸಿದಿದ್ದು, ನಾವೂರಿನಲ್ಲಿ ದೇವಸ್ಥಾನದ ಕಾಂಪೌಂಡ್ ಗೋಡೆ ಕುಸಿದಿದೆ. ಮಂಗಳೂರು ನಗರದ ಬಲ್ಲಾಳ್ಬಾಗ್ನಲ್ಲಿ ಮನೆಗೆ ಹಾನಿಯಾಗಿದ್ದು, ಬೈಕಂಪಾಡಿ ಕೈಗಾರಿಕಾ ಪ್ರದೇಶ ಜಲಾವೃತಗೊಂಡಿದೆ.
ಸೋಮೇಶ್ವರ ನಗರ ಪಾಲಿಕೆ ವ್ಯಾಪ್ತಿಯಲ್ಲಿ ದೊಡ್ಡ ಗಾತ್ರದ ಮರವೊಂದು ಕಾರಿನ ಮೇಲೆ ಬಿದ್ದಿದ್ದು, ಅದೃಷ್ಟವಶಾತ್ ಕಾರಿನೊಳಗೆ ಯಾರೂ ಇರಲಿಲ್ಲ.