ಮಂಗಳೂರು, ಜು. 09(DaijiworldNews/AA): ನಗರದ ಕೋಟೆಕಣಿಯ ಮನೆಗೆ ನುಗ್ಗಿ ಮನೆಮುಂದಿಯನ್ನು ಬೆದರಿಸಿ ದರೋಡೆ ಮಾಡಿದ್ದ ಚಡ್ಡಿಗ್ಯಾಂಗನ್ನು ಘಟನೆ ನಡೆದ 5 ಗಂಟೆಯೊಳಗೆ ಬಂಧಿಸುವಲ್ಲಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತರನ್ನು ಮಧ್ಯಪ್ರದೇಶ ಮೂಲದ ರಾಜು ಸಿಂಘಾನಿಯಾ(24), ಮಯೂರ್(30), ಬಾಲಿ(22), ಮತ್ತು ವಿಕ್ಕಿ(21) ಎಂದು ಗುರುತಿಸಲಾಗಿದೆ.
ಮಂಗಳವಾರ ಮುಂಜಾನೆ 4 ಗಂಟೆಯ ಸುಮಾರಿಗೆ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯ ದೇರೆಬೈಲು ಗ್ರಾಮದ ಕೋಟೆಕಣಿ ರಸ್ತೆಯ ವಿಕ್ಟರ್ ಮೆಂಡೋನ್ಸಾ ಎನ್ನುವವರ ಮನೆಯ ಕಿಟಕಿಯ ಗ್ರಿಲ್ ತುಂಡರಿಸಿ ಚೆಡ್ಡಿ ಗ್ಯಾಂಗ್ ಗೆ ಸೇರಿದ 4 ಜನ ಕಳ್ಳರು ಒಳ ಪ್ರವೇಶಿಸಿ ಬೆದರಿಸಿ ದರೋಡೆ ಮಾಡಿದ್ದರು. ಹಲ್ಲೆ ನಡೆಸಿ ಚಿನ್ನಾಭರಣ ದರೋಡೆ ಮಾಡಿದ ಬಳಿಕ ಅದೇ ಮನೆಯ ಕಾರಿನಲ್ಲಿ ಪರಾರಿಯಾಗಿದ್ದಾರೆ.
ದರೋಡೆಕೋರರು ಕಾರನ್ನು ಮುಲ್ಕಿ ಬಸ್ಸು ನಿಲ್ದಾಣದ ಸಮೀಪ ನಿಲ್ಲಿಸಿದ್ದರು. ಅಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಕೆಎಸ್ ಆರ್ ಟಿಸಿ ಬಸ್ಸಿನಲ್ಲಿ ಮಂಗಳೂರು ಕಡೆಗೆ ಪ್ರಯಾಣಿಸಿದ್ದರು. ಸಾರಿಗೆ ಸಂಸ್ಥೆ ಅಧಿಕಾರಿಗಳನ್ನು ಸಂಪರ್ಕಿಸಿದಾಗ ಅವರು ಬಾಗಲಕೋಟೆ ಕಡೆಯಿಂದ ಮಂಗಳೂರಿಗೆ ಬಂದ ಮಾಹಿತಿ ಸಿಕ್ಕಿತ್ತು. ಆ ಬಸ್ಸಿನ ನಿರ್ವಾಹಕರು ನಾಲ್ವರು ತಮ್ಮಲ್ಲಿ ಬೆಂಗಳೂರಿಗೆ ಹೋಗುವ ಬಸ್ಸಿನ ಬಗ್ಗೆ ಮಾಹಿತಿ ಕೇಳಿದ ಬಗ್ಗೆ ಹೇಳಿದ್ದಾರೆ.
ಬಳಿಕ ಪೊಲೀಸರು ಹಾಸನ ಜಿಲ್ಲಾ ಪೊಲೀಸ್ ಅಧೀಕ್ಷಕರಿಗೆ ಸೂಚನೆ ನೀಡಿ, ಸಕಲೇಶಪುರ ಡಿವೈಎಸ್ಪಿ, ಸಿಪಿಸಿ ಹಾಗೂ ಸಿಬ್ಬಂದಿಗಳ ತಂಡ ಸಕಲೇಶಪುರ ಸಮೀಪ ಬಸ್ಸನ್ನು ತಡೆದು ನಿಲ್ಲಿಸಿ ಅದರಲ್ಲಿದ್ದ ಪ್ರಯಾಣಿಸುತ್ತಿದ್ದ ನಾಲ್ಕು ಮಂದಿ ಕಳ್ಳರನ್ನು ವಶಕ್ಕೆ ಪಡೆದಿದ್ದಾರೆ.
ವಿಚಾರಣೆಯ ವೇಳೆ ನಾಲ್ವರು ಕಳ್ಳತನ ಮಾಡಿರುವುದಾಗಿ ತಿಳಿಸಿದ್ದಾರೆ. ಕೋಟೆಕಣಿಯಲ್ಲಿ ಸುಲಿಗೆ ಮಾಡಿದ್ದ ಎಲ್ಲಾ ಚಿನ್ನ ಹಾಗೂ ವಜ್ರದ ಆಭರಣಗಳು, ವಾಚ್ ಗಳು ಹಾಗೂ ಹಣವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.