ಕಾಪು, ಮೇ 16 (Daijiworld News/MSP): ಓಮ್ನಿ ಕಾರೊಂದು ರಾಂಗ್ ಸೈಡ್ ನಿಂದ ಬಂದ ಪರಿಣಾಮ ಕಾರು ಹಾಗೂ ರಿಕ್ಷಾಕ್ಕೆ ಢಿಕ್ಕಿಯಾದ ಘಟನೆ ಕಾಪು ಪೊಲೀಸ್ ಠಾಣಾ ವ್ಯಾಪ್ತಿಯ ಮೂಳೂರು ಸಿಎಸ್ಐ ಶಾಲೆ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೇ 16ರ ಗುರುವಾರ ನಡೆದಿದೆ.
ಓಮ್ನಿ ಡಿಕ್ಕಿಯ ರಭಸಕ್ಕೆ ಕಾರು ಹಾಗೂ ರಿಕ್ಷಾ ಹೆದ್ದಾರಿ ಪಕ್ಕಕ್ಕೆ ಉರುಳಿದೆ. ಕಾರು ಮತ್ತು ರಿಕ್ಷಾದಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಪು ಪೋಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.