ಮಂಗಳೂರು, ಜು. 14(DaijiworldNews/AA): ನಗರದ ಹೊರವಲಯದ ಮೂಡುಶೆಡ್ಡೆ- ಶಿವನಗರದಲ್ಲಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರಕ್ಕೆ (ಎಂ.ಎಸ್.ಪಿ.ಸಿ) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಧಿಡೀರ್ ಭೇಟಿ ನೀಡಿ, ಪುಷ್ಟಿ ಇನ್ನಿತರ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಪರೀಕ್ಷಿಸಿ, ಪರಿಶೀಲನೆ ನಡೆಸಿದರು.
ಅಂಗನವಾಡಿ ಕೇಂದ್ರಗಳ ಮೂಲಕ ಮಕ್ಕಳಿಗೆ ವಿತರಿಸಲಾಗುವ ಆಹಾರ ಸಾಮಗ್ರಿಗಳಲ್ಲಿ ಗುಣಮಟ್ಟ ಕಾಯ್ದುಕೊಳ್ಳಬೇಕೆಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.
ಈ ಸಂದರ್ಭದಲ್ಲಿ ಇಲಾಖೆಯ ಉಪ ನಿರ್ದೇಶಕ ಉಸ್ಮಾನ್, ಜಿಲ್ಲಾ ನಿರೂಪಣಾ ಅಧಿಕಾರಿ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ರಶ್ಮಿ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರದ ನಿರ್ವಹಣಾ ಅಧಿಕಾರಿ ಶೈಲಾ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.