ಮಂಗಳೂರು, ಜು. 15(DaijiworldNews/AA): ಭಾರೀ ಮಳೆಯಿಂದಾಗಿ ನಗರದ ನಂತೂರು ವೃತ್ತದ ಬಳಿ ಬೃಹತ್ ಹೊಂಡಗಳು ನಿರ್ಮಾಣವಾಗಿದ್ದು, ವಾಹನಗಳು ನಿಧಾನಗತಿಯಲ್ಲಿ ಸಂಚರಿಸುತ್ತಿವೆ. ಜೊತೆಗೆ ಇದರಿಂದಾಗಿ ವಾಹನ ಸಂಚಾರ ಅಸ್ತವ್ಯಸ್ತವಾಗಿದೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಟ್ರಾಫಿಕ್ ಡಿಸಿಪಿ ದಿನೇಶ್ ಕುಮಾರ್ ಅವರು ನಂತೂರು ವೃತ್ತದಲ್ಲಿ ಟ್ರಾಫಿಕ್ ಜಾಮ್ಗೆ ತಕ್ಷಣದ ಪರಿಹಾರವಿಲ್ಲ, ಆದರೆ ಮಳೆಗಾಲದಲ್ಲಿ ಪರಿಸ್ಥಿತಿಯನ್ನು ನಿಭಾಯಿಸಲು ಸಂಚಾರ ಇಲಾಖೆ ಸಿಬ್ಬಂದಿ ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ನಂತೂರು ಮತ್ತು ಕೆಪಿಟಿ ಸರ್ಕಲ್ನಲ್ಲಿ ಮೇಲ್ಸೇತುವೆಗಳ ನಿರ್ಮಾಣ ಮಾತ್ರ ಅಸ್ಪಷ್ಟವಾಗಿಯೇ ಉಳಿದಿದೆ. ಎರಡೂ ಮೇಲ್ಸೇತುವೆಗಳು ಮಂಜೂರಾಗಿವೆ, ಆದರೆ ಕಾಮಗಾರಿ ಆರಂಭವಾಗಿಲ್ಲ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಇಲ್ಲಿ ಮೇಲ್ಸೇತುವೆ ನಿರ್ಮಾಣವಾಗದೇ ಸುಗಮ ಸಂಚಾರ ಸಾಧ್ಯವಿಲ್ಲ ಎಂದು ಬೇಸರ ವ್ಯಕ್ಯಪಡಿಸಿದ್ದಾರೆ.
ಇನ್ನು ಮೇಲ್ಸೇತುವೆ ಕಾಮಗಾರಿ ಆರಂಭವಾದರೆ ನಂತೂರು ವೃತ್ತದಲ್ಲಿ ಟ್ರಾಫಿಕ್ ಹದಗೆಡಲಿದೆ ಎಂದು ಸಂಚಾರ ಪೊಲೀಸ್ ಅಧಿಕಾರಿಯೊಬ್ಬರು ಆತಂಕ ವ್ಯಕ್ತಪಡಿಸಿದ್ದಾರೆ.