ಉಡುಪಿ, ಜು. 18(DaijiworldNews/AK):ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆ ಜುಲೈ 19 ರಂದು ಜಿಲ್ಲೆಯಲ್ಲಿ ಶಾಲೆ, ಪಿಯುಸಿ ತರಗತಿಗೆ ಉಡುಪಿ ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ ರಜೆ ಘೋಷಣೆ ಮಾಡಿದ್ದಾರೆ.
ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳು (12 ನೇ ತರಗತಿಯವರೆಗೆ) ಜುಲೈ 19 ರಂದು ರಜೆ ಘೊಷಿಸಲಾಗಿದೆ. . ಪದವಿ ಕಾಲೇಜುಗಳಿಗೆ, ಎಂಜಿನಿಯರಿಂಗ್, ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ರಜೆ ಇಲ್ಲ ಎಂದಿನಂತೆ ಕಾರ್ಯನಿರ್ವಹಿಸಲಿವೆ. ನಡೆಯುತ್ತಿರುವ ಪ್ರತಿಕೂಲ ಹವಾಮಾನದ ನಡುವೆ ಸುರಕ್ಷತೆಯನ್ನು ಖಾತ್ರಿಪಡಿಸುವ ಉದ್ದೇಶದಿಂದ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ಮುನ್ನೆಚ್ಚರಿಕೆ ರಜೆಯನ್ನು IMD ಮುಂದಿನ ಎರಡು ದಿನಗಳವರೆಗೆ ಘೋಷಿಸಿದೆ.
ಕಳೆದ 24 ಗಂಟೆಗಳಲ್ಲಿ, ಗಮನಾರ್ಹ ಮಳೆಯಿಂದಾಗಿ ಅನೇಕ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಉಂಟಾಗಿದ್ದು, ನಾಗರಿಕ ಜೀವನದ ಮೇಲೆ ಪರಿಣಾಮ ಬೀರಿದೆ.ಭಾರೀ ಮಳೆಯಿಂದಾಗಿ ಸಾಕಷ್ಟು ಹಾನಿಯಾಗಿದೆ ಎಂದು ಉಡುಪಿ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಭಾರೀ ಮಳೆ ಮತ್ತು ಸಂಭಾವ್ಯ ಪ್ರವಾಹದ ಈ ಅವಧಿಯಲ್ಲಿ ಸಾರ್ವಜನಿಕರು ಎಚ್ಚರಿಕೆ ವಹಿಸಲು ಮತ್ತು ಜಾಗರೂಕರಾಗಿರಲು ಸೂಚಿಸಲಾಗಿದೆ. ತುರ್ತು ಸೇವೆಯು ಉಚಿತ ನಿಯಂತ್ರಣ ಕೊಠಡಿ ಸಂಖ್ಯೆ 0820-2574802 ಮೂಲಕ 24x 7 ಲಭ್ಯವಿದೆ.