ಬಂಟ್ವಾಳ, ಜು. 19(DaijiworldNews/AA): ಭಾರೀ ಗಾಳಿ ಮಳೆಗೆ ಕೋಳಿ ಸಾಕಣೆ ಮಾಡುವ ಶೆಡ್ ಏಕಾಏಕಿ ಕುಸಿದು ಬಿದ್ದ ಪರಿಣಾಮ ಸುಮಾರು ಒಂದುವರೆ ಸಾವಿರ ಕೋಳಿಗಳು ಸಾವನ್ನಪ್ಪಿದ ಘಟನೆ ಬಂಟ್ವಾಳ ತಾಲೂಕು ಕುಳ ಗ್ರಾಮದ ಸೇಕೆಹಿತ್ಲು ಎಂಬಲ್ಲಿ ಗುರುವಾರ ತಡರಾತ್ರಿ ನಡೆದಿದೆ.
ಬಂಟ್ವಾಳ ತಾಲೂಕು ಕುಳ ಗ್ರಾಮದ ಸೇಕೆಹಿತ್ಲು ನಿವಾಸಿ ರಾಘವ ಅವರ ಮಾಲಕತ್ವದ ಶೆಡ್ ಇದಾಗಿದೆ. ಸುಮಾರು 2,200 ಕೋಳಿಗಳನ್ನು ಅವರು ಸಾಕಣೆ ಮಾಡುತ್ತಿದ್ದರು. ಈ ಪೈಕಿ 700 ಕೋಳಿಗಳು ದೊಡ್ಡದಾಗಿದ್ದವು. ಈ ಹಿನ್ನೆಲೆ 700 ಕೋಳಿಗಳನ್ನು ಮಾರಾಟ ಮಾಡಲಾಗಿತ್ತು.
ಶೆಡ್ಡಿನ ಮೇಲ್ಛಾವಣಿ ಏಕಾಏಕಿ ಕುಸಿದು ಬಿದ್ದ ಹಿನ್ನೆಲೆ ಸುಮಾರು 1,500 ಕೋಳಿಗಳು ಅದರಡಿಗೆ ಬಿದ್ದು ಮೃತಪಟ್ಟಿದೆ. ಘಟನೆಯಿಂದಾಗಿ ಶೆಡ್ ಸಂಪೂರ್ಣ ನಾಶವಾಗಿದ್ದು, ಅಪಾರ ನಷ್ಟ ಸಂಭವಿಸಿದೆ ಎಂದು ಹೇಳಲಾಗಿದೆ.