ಉಡುಪಿ, ಜು 20 (DaijiworldNews/MS): ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶಿರ್ವದಲ್ಲಿ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದ್ದು ವ್ಯಕ್ತಿಯೊಬ್ಬ ತನ್ನ ದ್ವಿಚಕ್ರ ವಾಹನದಲ್ಲಿ ನಾಯಿಯನ್ನು ರಸ್ತೆಯಲ್ಲಿ ಎಳೆದುಕೊಂಡು ಹೋಗುತ್ತಿರುವುದು ಸಾರ್ವಜನಿಕರಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದ್ದು, ಘಟನೆ ಜು.20ರ ಶನಿವಾರ ಬೆಳಗ್ಗೆ ನಡೆದಿದೆ.
ಈ ವ್ಯಕ್ತಿ ನಾಯಿಯ ಕುತ್ತಿಗೆಗೆ ಸರಪಳಿಯನ್ನು ಜೋಡಿಸಿ ನಂತರ ತನ್ನ ಸ್ಕೂಟರ್ನ ಸೀಟಿಗೆ ಇನ್ನೊಂದು ತುದಿಯನ್ನು ಕಟ್ಟಿದ್ದಾನೆ. ಈ ವ್ಯಕ್ತಿ ಕೊಂಬಗುಡ್ಡೆಯ ವ್ಯಕ್ತಿ ಎಂದು ತಿಳಿದುಬಂದಿದ್ದು ಶಿರ್ವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸಾರ್ವಜನಿಕರು ಕ್ರೂರ ಕೃತ್ಯವನ್ನು ಖಂಡಿಸಿದ್ದು ಮುಂದೆ ಇಂತಹ ಘಟನೆಗಳು ನಡೆಯದಂತೆ ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಜರುಗಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ
ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.