ಉಡುಪಿ, ಜು. 20(DaijiworldNews/AA): ನನ್ನ ವಿರುದ್ಧ ಮಾಡಿರುವ ಆರೋಪ ವಾಪಸ್ ಪಡೆಯದಿದ್ದರೆ ಧರಣಿ ಕೂರುತ್ತೇನೆ. ವಾರದೊಳಗೆ ನಿಮ್ಮ ಹೇಳಿಕೆ ವಾಪಸ್ ಪಡೆಯಬೇಕು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಹಗರಣ ಆರೋಪ ಮಾಡಿದ್ದ ಸಿಎಂ ಸಿದ್ದರಾಮಯ್ಯ ವಿರುದ್ಧ ಕಿಡಿ ಕಾರಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಕೋಟ ಶ್ರೀನಿವಾಸ್ ಪೂಜಾರಿ ಅವರ ವಿರುದ್ಧ ಹಗರಣದ ಆರೋಪ ಮಾಡಿದ್ದರು. ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೋಟ ಶ್ರೀನಿವಾಸ್ ಪೂಜಾರಿ ಅವರು, ಸಿಐಡಿ ನಿಮ್ಮ ಕೈಯಲ್ಲಿದೆ. ನೀವು ಮುಖ್ಯಮಂತ್ರಿ ಆಗಿ ಒಂದು ವರ್ಷ ಕಳೆಯಿತು. ನಾನು ತಪ್ಪು ಮಾಡಿದರೆ ಜೈಲು ಶಿಕ್ಷೆ ಸೇರಿ ಏನನ್ನು ಕೊಡುವ ಅಧಿಕಾರ ನಿಮಗೆ ಇತ್ತು. ಅದ್ಯಾವುದನ್ನು ನೀವು ಮಾಡಿಲ್ಲ. ನಾನು ಮಂತ್ರಿಯಾಗಿದ್ದಾಗ ವಿಪಕ್ಷ ನಾಯಕರಾಗಿದ್ದೀರಿ ಆಗಲೂ ಏನು ಸೊಲ್ಲೆತ್ತಿಲ್ಲ. ವಾಲ್ಮೀಕಿ ಹಗರಣದ ಆರೋಪ ಬಂದಾಗ ಬೇರೆಯವರ ತಲೆ ಮೇಲೆ ಹಾಕಲು ಹೀಗೆ ಹೇಳುತ್ತಿದ್ದೀರಿ ಎಮದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನನ್ನ ಹೆಸರು ಉಲ್ಲೇಖಿಸಿರುವುದನ್ನು ವಾಪಾಸ್ ಪಡೆಯಿರಿ. ಇಲ್ಲವಾದರೆ ತಕ್ಷಣ ಈ ಪ್ರಕರಣವನ್ನು ಸಿಬಿಐಗೆ ವಹಿಸಿ. ಒಂದು ರೂಪಾಯಿ ನಾನು ಅವ್ಯವಹಾರ ಮಾಡಿದ್ದರೆ ಸಿಬಿಐ ತನಿಖೆ ಮಾಡಿಸಿ. ವಾರದೊಳಗೆ ನಿಮ್ಮ ಹೇಳಿಕೆ ವಾಪಸ್ ಪಡೆಯಬೇಕು. ವಿಧಾನಸೌಧ ಮತ್ತು ವಿಕಾಸ ಸೌಧ ನಡುವೆ ಇರುವ ಗಾಂಧಿ ಪ್ರತಿಮೆ ಎದುರು ಧರಣಿ ಕುಳಿತುಕೊಳ್ಳುತ್ತೇನೆ ಎಂದು ಎಚ್ಚರಿಕೆ ನೀಡಿರುವ ಅವರು ಈ ಮೂಲಕ ಸಿಬಿಐ ತನಿಖೆಗೆ ಒತ್ತಾಯಿಸುತ್ತೇನೆ. ಪ್ರಜಾಪ್ರಭುತ್ವದಲ್ಲಿ ಸತ್ಯಕ್ಕೆ ಅಪಚಾರವಾಗಬಾರದು. ಮಾನದಷ್ಟು ಮುಖದ ಮೇಲೆ ಹಾಕಲು ಬಹುಶಃ ಅನುಮತಿ ಬೇಕಾಗುತ್ತೆ. ಈ ಬಗ್ಗೆ ಕೂಡ ಯೋಚನೆ ಮಾಡುತ್ತೇನೆ ಎಂದು ಹೇಳಿದ್ದಾರೆ.
ಪರಿಶಿಷ್ಟ ಪಂಗಡದ ಹಣವನ್ನು ಹಿತ ರಾಜ್ಯದ ಚುನಾವಣೆಗೆ ಕೊಟ್ಟಿದ್ದೀರಿ. ದೊಡ್ಡ ಅಪರಾಧ ಮಾಡಿರುವ ಕಾಂಗ್ರೆಸ್ ಸರ್ಕಾರ ತನ್ನ ಹುಳುಕು ಮುಚ್ಚಿಸಲು ಸಲ್ಲದ ಆರೋಪ ಮಾಡುತ್ತೀರಿ. ಹಿಂದಿನ ಸರಕಾರದಲ್ಲಿ ಅಪರಾಧವೇ ಮಾಡದ ಪ್ರಕರಣಗಳನ್ನು ಹೇಳುತ್ತಿದ್ದೀರಿ. ನನ್ನ ಹೆಸರನ್ನು ಕೂಡ ಹಗರಣದಲ್ಲಿ ಎಳೆದು ತಂದಿದ್ದೀರಿ
ಕೋಟ ಶ್ರೀನಿವಾಸ ಪೂಜಾರಿ ಕೊಳವೆಬಾವಿ ಹಗರಣ ಮಾಡಿದ್ದಾನೆ ಎಂದಿದ್ದೀರಿ. ನಿಮಗೆ ನಾನು ಅಧಿಕೃತ ಪತ್ರ ಬರೆಯುತ್ತೇನೆ. ನಾನು ಮಂತ್ರಿಯಾಗಿದ್ದಾಗ ಟೆಂಡರಿನಲ್ಲಿ ಅಕ್ರಮವಾಗಿದೆ ಎಂಬ ದೂರು ಕೇಳಿ ಬಂತು. ಕಡತ ತರಿಸಿಕೊಂಡು ನಾನು ತಕ್ಷಣ ಸಿಐಡಿ ತನಿಖೆಗೆ ಆದೇಶಿಸಿದೆ. ರಾಜ್ಯದ ಇತಿಹಾಸದಲ್ಲಿ ಟೆಂಡರ್ ಬಿಟ್ಟರೆ ಬೇರೆ ವ್ಯವಸ್ಥೆ ಇರಲಿಲ್ಲ. ಪ್ರಥಮ ಬಾರಿಗೆ ಆದೇಶ ದೊರೆತ ರೈತರಿಗೆ ನೇರ ಕೊಳವೆಬಾವಿ ಖರೀದಿಗೆ ಅವಕಾಶ ಕಲ್ಪಿಸಿದೆ. ಖಾತೆಗೆ ನೇರ ಜಮಾ ಮಾಡುವ ವ್ಯವಸ್ಥೆ ಜಾರಿಗೆ ತಂದಿದ್ದೆ. ರೈತನಿಗೆ ಕೊಳವೆಬಾವಿ ಮಂಜೂರಾದರೆ ಯಾವ ಏಜೆನ್ಸಿ ಮೂಲಕ ತರಿಸಿಕೊಳ್ಳಬಹುದು ಈ ವ್ಯವಸ್ಥೆ ಮಾಡಿದ್ದೆ. ನಾನು ಮಾಡಿದ ವ್ಯವಸ್ಥೆ ಇವತ್ತಿಗೂ ನಡೆಯುತ್ತಿದೆ ಎಮದು ತಿಳಿಸಿದರು.
ಕೋಟ ಶ್ರೀನಿವಾಸ ಪೂಜಾರಿ ಸಮಾಜ ಕಲ್ಯಾಣ ಮಂತ್ರಿಯಾಗಿದ್ದಾಗ ಹಗರಣ ಆಗಿಲ್ಲ ಎಂದು ಅಧಿಕಾರಿಗಳು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗೆ ಹೇಳಿದ್ದಾರೆ. ಒಂದೇ ಒಂದು ರೂಪಾಯಿ ದುರುಪಯೋಗ ಆಗಿಲ್ಲ ಎಂದು ಅಧಿಕಾರಿಗಳೇ ಹೇಳಿದ್ದಾರೆ. ನನ್ನ ಮೇಲೆ ಉದ್ದೇಶಪೂರ್ವಕವಾಗಿ ಆರೋಪ ಮಾಡುತ್ತಿದ್ದೀರಿ. ನಾನು ಸ್ಪಷ್ಟೀಕರಣ ಕೇಳಿ ನಿಮಗೆ ಪತ್ರ ಬರೆದಿದ್ದೇನೆ ಎಂದರು.
ಭೋವಿ ನಿಗಮದ ವ್ಯವಹಾರ ಆರೋಪ ಮಾಡಿದ್ದೀರಿ. ಈ ಹಿಂದೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಕೆಲ ಅಧಿಕಾರಿಗಳನ್ನು ನೇಮಕ ಮಾಡಿದ್ದರು. ಅಧಿಕಾರಿಗಳು ದುರ್ನಡತೆಯವರಾಗಿದ್ದರು ಹಗರಣ ಮಾಡಿದ್ದರು. ಅಧಿಕಾರಿಗಳನ್ನು ತಕ್ಷಣ ಅಮಾನತು ಮಾಡಿದ್ದೆ. ಈ ಪ್ರಕರಣವನ್ನು ತನಿಖೆ ನಡೆಸುವಂತೆ ಸಿಐಡಿಗೆ ಆದೇಶ ಮಾಡಿದ್ದೆ ಎಂದು ಹೇಳಿದರು.