ಕಾಸರಗೋಡು, ಜು 22 (DaijiworldNews/ AK): ಗ್ರೈಂಡರ್ ಗೆ ಶಾಲ್ ಸಿಲುಕಿ ಗೃಹಿಣಿ ಮೃತಪಟ್ಟ ದಾರುಣ ಘಟನೆ ಕುಂಬಳೆ ಸಮೀಪದ ಪೆರುವಾಡ್ ನಲ್ಲಿ ಸೋಮವಾರ ಸಂಜೆ ನಡೆದಿದೆ.
ಪೆರುವಾಡ್ ಕೆ .ಕೆ ನಗರದ ಇಸ್ಮಾಯಿಲ್ ರವರ ಪತ್ನಿ ನಫೀಸಾ ( ೫೨) ಮೃತಪಟ್ಟವರು. ಗ್ರೈಂಡರ್ ನಲ್ಲಿ ಅಕ್ಕಿ ಅರೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಇದನ್ನು ಗಮನಿಸಿದ ಪತಿ ಇಸ್ಮಾಯಿಲ್ ಕೂಡಲೇ ಕುಂಬಳೆ ಆಸ್ಪತ್ರೆಗೆ ತಲಪಿಸಿದರೂ ಜೀವ ಉಳಿಸಲಾಗಲಿಲ್ಲ . ಕುಂಬಳೆ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.