ಮಂಗಳೂರು, ಜು.23(DaijiworldNews/AA): ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಮಂಗಳೂರು ಮಹಾ ನಗರ ಪಾಲಿಕೆಯ ಆಯುಕ್ತರನ್ನು ವಜಾಗೊಳಿಸಲು ಒತ್ತಾಯಿಸಿ ಮನಪಾ ಕಚೇರಿ ಮುಂದೆ ಸಿಪಿಐಎಂ ಮುಖಂಡರು ಮತ್ತು ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನೆ ನಡೆಸಿದ ಸಿಪಿಐಎಂ ಮುಖಂಡರು ಮತ್ತು ಕಾರ್ಯಕರ್ತರನ್ನು ಬಂಧಿಸಲಾಯಿತು.