ಬೆಳ್ತಂಗಡಿ, ಜು 27 (DaijiworldNews/MS): ಕಳೆದ ಕೆಲವು ದಿನಗಳಿಂದ ಸುರಿಯುತ್ತಿವ ಭಾರೀ ಮಳೆಗೆ ಚಾರ್ಮಾಡಿ ಘಾಟ್ನಲ್ಲಿ ಗುಡ್ಡ ಕುಸಿದು ಟ್ರಾಫಿಕ್ ಜಾಮ್ ಉಂಟಾಗಿದ್ದ ಘಟನೆ ಜು.26 ರ ತಡ ರಾತ್ರಿ ಸಂಭವಿಸಿದೆ.
ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ 10ನೇ ತಿರುವಿನಲ್ಲಿ ಗುಡ್ಡ ಕುಸಿದಿದ್ದು ಚಾರ್ಮಾಡಿ ಘಾಟ್ನಿಂದ ಕೊಟ್ಟಿಗೆಹಾರದವರೆಗೂ ವಾಹನಗಳು ನಿಂತಲ್ಲೇ ನಿಂತಿದ್ದವು. ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಯ್ತು.