ಮಂಗಳೂರು, ಜು.30(DaijiworldNews/AA): ನಗರದಲ್ಲಿ 'ಆಪರೇಷನ್ ಟೈಗರ್' ಕಾರ್ಯಾಚರಣೆ ಇಂದು ಕೂಡ ಮುಂದುವರೆದಿದ್ದು, ಇದನ್ನು ಖಂಡಿಸಿ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರ ಕಚೇರಿಗೆ ಬೀದಿಬದಿ ವ್ಯಾಪಾರಿಗಳು ಮುತ್ತಿಗೆ ಹಾಕಿದ್ದು, ಪ್ರತಿಭಟನೆ ನಡೆಸುತ್ತಿದ್ದಾರೆ.
ಟೈಗರ್ ಕಾರ್ಯಾಚರಣೆ ನಿಲ್ಲಿಸಬೇಕು ಮತ್ತು ಬೀದಿಬದಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಪ್ರತಿಭಟನಾಕಾರರು ಆಯುಕ್ತರ ಕಚೇರಿ ಮುಂದೆ ಧರಣಿ ಆರಂಭಿಸಿದ್ದಾರೆ. ನಿನ್ನೆ ನಡೆದ ಟೈಗರ್ ಕಾರ್ಯಾಚರಣೆಯಲ್ಲಿ ತಳ್ಳುಗಾಡಿ, ಗೂಡಂಗಡಿಗಳು, ಸಾಮಗ್ರಿಗಳಿಗೆ ಹಾನಿ ಮಾಡಿದ್ದಲ್ಲದೆ ಆಹಾರ, ತಿಂಡಿತಿನಿಸುಗಳನ್ನು ನಾಶಪಡಿಸಿರುವುದರ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ದಾರೆ.
ಮಂಗಳೂರು ನಗರದ ಲೇಡಿಹಿಲ್ ಮಣ್ಣಗುಡ್ಡೆ ರಸ್ತೆಯ ಬೀದಿಬದಿ ಅಂಗಡಿಯನ್ನು 'ಆಪರೇಷನ್ ಟೈಗರ್' ಕಾರ್ಯಾಚರಣೆ ಅಡಿಯಲ್ಲಿ ನಿನ್ನೆ ತೆರವುಗೊಳಿಸಲಾಗಿತ್ತು. ಇನ್ನು ಕಾರ್ಯಾಚರಣೆಗೆ ಅಡ್ಡಿ ಪಡಿಸಿದವರನ್ನು ಕೂಡ ಪೊಲಿಸರು ವಶಕ್ಕೆ ಪಡೆದುಕೊಂಡಿದ್ದರು.