ಉಡುಪಿ, ಆ 2(DaijiworldNews/ AK): ಉಡುಪಿ ಜಿಲ್ಲಾ ಆಸ್ಪತ್ರೆಯ ಬಳಿ ನೂತನವಾಗಿ ನಿರ್ಮಾಣವಾಗುತ್ತಿರುವ 250 ಹಾಸಿಗೆಗಳ ಸುಸಜ್ಜಿತವಾದ ಆಸ್ಪತ್ರೆಗೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಹಲವಾರು ಕೊಡುಗೆಯನ್ನು ಕೊಟ್ಟು ಹಾಗೂ ಕರ್ನಾಟಕ ರಾಜ್ಯ ಹಾಗೂ ದೇಶಕ್ಕೆ ಅನೇಕ ಕೊಡುಗೆಗಳನ್ನು ಕೊಟ್ಟ ಮಾಜಿ ಲೋಕ ಸಭಾ ಸದಸ್ಯರು ಹಾಗೂ ಮಾಜಿ ಸಚಿವರಾದ ದಿವಂಗತ ಆಸ್ಕರ್ ಫೆರ್ನಾ೦ಡೀಸ್ ರವರ ಹೆಸರನ್ನು ಇಡಬೇಕೆಂದು ಉಡುಪಿ ಜಿಲ್ಲಾ ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.
ಈ ನೂತನ ಸರಕಾರಿ ಜಿಲ್ಲಾ ಆಸ್ಪತ್ರೆಗೆ ದಿವಂಗತ ಆಸ್ಕರ್ ಫೆರ್ನಾಂಡಿಸ್ ಹೆಸರನ್ನು ನಾಮನಿರ್ದೇಶನ ಮಾಡಲು ಕಾಂಗ್ರೆಸ್ ಮುಖಂಡರಾದ ಮುನಿಯಾಲ್ ಉದಯಕುಮಾರ್ ಶೆಟ್ಟಿ ಅವರ ನೇತೃತ್ವದಲ್ಲಿ ಸಮಾಜ ಸೇವಕರು ಕಾಂಗ್ರೆಸ್ ಮುಖಂಡರು ಕೆ.ಕೃಷ್ಣಮೂರ್ತಿ ಆಚಾರ್ಯರವರು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ವಿಧಾನ ಸಭಾ ಸಭಾಧ್ಯಕ್ಷರಾದ ಯು. ಟಿ ಖಾದರ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ವಿಧಾನ ಪರಿಷತ್ತ್ ಶಾಸಕರಾದ ಮಂಜುನಾಥ್ ಭಂಡಾರಿ, ವಿಧಾನ ಪರಿಷತ್ತ್ ಸದಸ್ಯರಾದ ಐವನ್ ಡಿಸೋಜರವರಿಗೆ ಮನವಿ ಮಾಡಿದರು.