ಪುತ್ತೂರು, ಆ.04(DaijiworldNews/AA): ಅನಾರೋಗ್ಯದಿಂದ ಉಪ್ಪಿನಂಗಡಿ ಸರಕಾರಿ ಪಿಯು ಕಾಲೇಜಿನ ಪ್ರಥಮ ವರ್ಷದ ಪಿಯು ವಿದ್ಯಾರ್ಥಿಯೊಬ್ಬ ಶನಿವಾರ ಮೃತಪಟ್ಟಿದ್ದಾನೆ.
ಇಸಾಕ್ ಅವರ ಪುತ್ರ ಮಹಮ್ಮದ್ ಸಿರಾಜುದ್ದೀನ್ (17) ಮೃತ ವಿದ್ಯಾರ್ಥಿ.
ಕಳೆದ ಎರಡು ದಿನಗಳಿಂದ ಜ್ವರದಿಂದ ಬಳಲುತ್ತಿದ್ದ ಅವರು ಅದಕ್ಕೆ ಔಷಧ ತೆಗೆದುಕೊಂಡಿದ್ದರು. ಸಿರಾಜುದ್ದೀನ್ ಆಗಸ್ಟ್ 3ರಂದು ಬಸ್ ಗಾಗಿ ಕಾಯುತ್ತಿದ್ದಾಗ ಕುಸಿದು ಬಿದ್ದಿದ್ದಾರೆ. ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.
ಸಿರಾಜುದ್ದೀನ್ ಸೌಮ್ಯ ಸ್ವಭಾವದವರಾಗಿದ್ದರು. ಮತ್ತು ಕಾಲೇಜು ಶಿಕ್ಷಣದ ಜೊತೆಗೆ ಧಾರ್ಮಿಕ ಅಧ್ಯಯನವನ್ನು ಮುಂದುವರಿಸುತ್ತಿದ್ದರು.