ಮಂಗಳೂರು,ಆ 5 (DaijiworldNews/MS): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದ ಮೂರು ವಾರಗಳಿಂದ ಆರ್ಭಟಿಸಿದ ಮಳೆ ಕೊಂಚ ಇಳಿಮುಖವಾಗಿದೆ.
ಜಿಲ್ಲೆಯಲ್ಲಿ ಸತತವಾಗಿ ಸುರಿದ ಮಳೆಯಿಂದಾಗಿ ಎಪ್ರಿಲ್ 1ರಿಂದ ಆ. 4 ಒಟ್ಟು 678 ಮನೆಗಳಿಗೆ ಹಾನಿಯಾಗಿದೆ. ಈ ಪೈಕಿ 166 ಮನೆಗಳು ಸಂಪೂರ್ಣ ಮತ್ತು 512 ಮನೆಗಳಿಗೆ ಭಾಗಶಃ ಹಾನಿಯಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.
ಭಾರೀ ಮಳೆಯ ಕಾರಣದಿಂದ ಅವಘಡ ಸಂಭವಿಸಿ 11 ಮಂದಿ ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿದ್ದಾರೆ. ನಿರಂತರ ಮಳೆಯಿಂದಾಗಿ ಜಿಲ್ಲೆಯಲ್ಲಿ 7.190 ಹೆಕ್ಟೇರ್ ಪ್ರದೇಶದಲ್ಲಿನ ತೋಟಗಾರಿಕಾ ಬೆಳೆ ನಷ್ಟವಾಗಿದೆ. ಬಾರೀ ಗಾಳಿ ಮಳೆಯ ಪರಿಣಾಮದಿಂದಾಗಿ 35 ಸೇತುವೆಗಳು ಮತ್ತು 6484 ವಿದ್ಯುತ್ ಕಂಬಗಳಿಗೆ ಹಾನಿಯಾಗಿದೆ ಎಂದು ದ.ಕ. ಜಿಲ್ಲಾಡಳಿತ ತಿಳಿಸಿದೆ