ಸುಳ್ಯ, ಆ.07(DaijiworldNews/AA): ಭಾರೀ ಮಳೆಗೆ ಡಾಮಾರು ರಸ್ತೆ ಕುಸಿತಗೊಂಡು, ವಾಹನಗಳ ಸಂಚಾರಕ್ಕೆ ತೊಂದರೆಯಾಗುತ್ತಿರುವ ಘಟನೆ ಸುಳ್ಯ ತಾಲೂಕಿನ ನೆಟ್ಟಾರಿನಲ್ಲಿ ಕಂಡುಬಂದಿದೆ.
ಇತ್ತೀಚೆಗೆ ಸುರಿದ ಭಾರೀ ಮಳೆಗೆ ರಸ್ತೆಯಲ್ಲಿ ಕುಸಿತ ಉಂಟಾಗಿ ಡಾಮರು ಕಿತ್ತು ಹೋಗಿದೆ. ಇದರಿಂದಾಗಿ ವಾಹನಗಳ ಸಂಚಾರಕ್ಕೆ ಸಮಸ್ಯೆಯಾಗಿರುವುದಾಗಿ ಕಂಡುಬಂದಿದೆ. ಕೂಡಲೇ ಹದಗೆಟ್ಟ ರಸ್ತೆ ದುರಸ್ತಿಗೊಳಿಸಬೇಕು ಎಂದು ಸ್ಥಳೀಯ ನಾಗರಿಕರು ಹಾಗೂ ವಾಹನ ಸವಾರರು ಆಗ್ರಹಿಸಿದ್ದಾರೆ.