ಮಂಗಳೂರು, ಆ 9(DaijiworldNews/MS): ದಕ್ಷಿಣ ಕನ್ನಡ, ಉಡುಪಿ, ಕೇರಳದ ಕಾಸರಗೋಡು ಜಿಲ್ಲೆ ಸೇರಿದಂತೆ ಕರಾವಳಿಯಾದ್ಯಂತ ಇಂದು ಶುಕ್ರವಾರ ನಾಗರಪಂಚಮಿ ಹಬ್ಬವನ್ನು ಭಕ್ತಿ ಶ್ರದ್ಧೆಯಿಂದ ಆಚರಿಸಲಾಗುತ್ತಿದೆ.
ಪವಿತ್ರ ನಾಗಾರಾಧನಾ ಕ್ಷೇತ್ರಗಳಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರ, ಕುಡುಪು ಶ್ರೀ ಅನಂತಪದ್ಮನಾಭ ದೇವಸ್ಥಾನ, ಉಡುಪಿಯ ಶ್ರೀಕೃಷ್ಣಮಠ, ನಾಲ್ಕು ಸ್ಕಂದಾಲಯಗಳು (ಮುಚ್ಚಲಕೋಡು, ಮಾಂಗೋಡು, ತಾಂಗೋಡು, ಅರಿತೋಡು), ಶ್ರೀವೆಂಕಟರಮಣ ದೇವಸ್ಥಾನ, ನೀಲಾವರ ಪಂಚಮಿಕಾನ, ಸಗ್ರಿ ವಾಸುಕೀ ಅನಂತಪದ್ಮನಾಭ ದೇವಸ್ಥಾನ, ಬಡಗುಪೇಟೆ ಅನಂತಪದ್ಮನಾಭ ದೇವಸ್ಥಾನ ಸಹಿತ ಕರಾವಳಿ ಭಾಗದ ವಿವಿಧ ನಾಗ ಸಾನಿಧ್ಯದ ಕ್ಷೇತ್ರಗಳಲ್ಲಿ ಸೋಮವಾರ ಶ್ರದ್ಧಾಭಕ್ತಿಯ ನಾಗರ ಪಂಚಮಿ ಆಚರಣೆ ನೆರವೇರಲಿದೆ.
ಭಕ್ತರಿಂದ ಕ್ಷೇತ್ರದರ್ಶನ, ವಿಶೇಷ ಪೂಜೆಗಳು ಪುಣ್ಯ ಕ್ಷೇತ್ರಗಳಲ್ಲಿ ನೆರವೇರಲಿದೆ. ನಾಡಿನ ವಿವಿಧ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಗಳು, ದೇವಾಲಯಗಳ ನಾಗಸನ್ನಿಧಿ, ಕುಟುಂಬದ ಮೂಲ ನಾಗಬನಗಳಲ್ಲಿ ನಾಗತಂಬಿಲ, ಸೀಯಾಳಾಭಿಷೇಕ, ಪಂಚಾಮೃತ ಅಭಿಷೇಕ ಮುಂತಾದ ಸೇವೆಗಳು ನಡೆಯಲಿದೆ.