ಮಂಗಳೂರು,ಮೇ 22 (Daijiworld News/MSP): ವಿದ್ಯಾರ್ಥಿಗಳು ಆಸಕ್ತಿಯಿಂದ ಹಾಗೂ ಕಠಿಣ ಪರಿಶ್ರಮದೊಂದಿಗೆದುಡಿದರೆಖಂಡಿತಉತ್ತಮ ಭವಿಷ್ಯ ರೂಪಿಸಿಕೊಳ್ಳುತ್ತಾರೆ.’ಯಶಸ್ಸಿನ ಮೂಲಮಂತ್ರಕಠಿಣ ಶ್ರಮ- ಶ್ರಮ ಏವ ಜಯತೇ’ ಯಶಸ್ಸಿಗೆಯಾವುದೇಅಡ್ಡ ದಾರಿಗಳಿಲ್ಲ ಎಂದುಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆಯಉಪಾಧ್ಯಕ್ಶೆಡಾ.ಉಷಾಪ್ರಭಾಎನ್. ನಾಯಕ್ರವರು ತಿಳಿಸಿದರು.
ಅವರು ಮಂಗಳೂರಿನ ಭಗವತಿ ಕ್ಷೇತ್ರದ ಕೂಟಕ್ಕಳ ಸಭಾಂಗಣದಲ್ಲಿ ನಡೆದ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ಆಯೋಜಿಸಿದ ಓರಿಯಂಟೇಶನ್ 2019 ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಪದವಿಪೂರ್ವ ಹಂತವು ವಿದ್ಯಾರ್ಥಿಗಳ ಪಾಲಿಗೆ ಅತೀ ಸಂತೋಷಕರ ಸಮಯ. ಈ ಸಮಯ ವ್ಯರ್ಥ ಮಾಡಿಕೊಳ್ಳದೆ ಸದುಪಯೋಗಿಸಿಕೊಳ್ಳಬೇಕು.ಮಕ್ಕಳ ಭವಿಷ್ಯವನ್ನು ರೂಪುಗೊಳಿಸುವಲ್ಲಿ ಪೋಷಕರ ಪಾತ್ರತುಂಬಾ ಮುಖ್ಯ. ವಿದ್ಯಾರ್ಥಿಯು ಶೈಕ್ಷಣಿಕ ಶ್ರೇಷ್ಟತೆಯನ್ನು ಪಡೆಯಲು ಅವರ ಪರಿಶ್ರಮದೊಂದಿಗೆ, ಪೋಷಕರ ಪ್ರೋತ್ಸಾಹ ಕೂಡ ಅತೀ ಮುಖ್ಯ. ಹದಿಹರೆಯದ ಹಂತದಲ್ಲಿ ವಿದ್ಯಾರ್ಥಿಗಳು ತಮ್ಮ ಜೀವನದ ಮೇಲೆ ಪರಿಣಾಮ ಬೀರುವ ಹಲವಾರು ತಪ್ಪುಗಳನ್ನು ಮಾಡುತ್ತಾರೆ. ಆದರೆ ನಮ್ಮ ಸಂಸ್ಥೆಯು ವಿದ್ಯಾರ್ಥಿಗಳಿಗೆ ಸರಿಯಾದ ಮಾರ್ಗದಲ್ಲಿ ನಡೆಯುವಂತೆ ಮಾಡುತ್ತದೆ. ವಿದ್ಯಾರ್ಥಿಗಳು ಮೊಬೈಲ್ ಬಳಕೆಯಿಂದ ದೂರವಿರಬೇಕು ಈ ಚಟ ಧೂಮಪಾನ ಮದ್ಯಪಾನಕ್ಕಿಂತಲೂ ಹಾನಿಕರವಾದದ್ದು. ಹಣದಿಂದ ಎಲ್ಲವನ್ನು ಪಡೆದುಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಪ್ರಮಾಣ ವಚನವನ್ನು ಭೋಧಿಸಿದರು.
ಎಕ್ಸ್ಪರ್ಟ್ ಶಿಕ್ಷಣ ಮತ್ತು ಸಮೂಹ ಸಂಸ್ಥೆಗಳ ಅಧ್ಯಕ್ಶರಾಗಿರುವ ಪೊ.ನರೇಂದ್ರಎಲ್. ನಾಯಕ್ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಯು ಸರಿಯಾದ ಗುರಿಯನ್ನು ಹೊಂದಿರಬೇಕು. ಕಠಿಣ ಪರಿಶ್ರಮ ಮತ್ತುಗುರಿ ಸಾಧಿಸುವ ಛಲದೊಂದಿಗೆ ಮುನ್ನಡೆದರೆ ಸಾಧನೆಯ ಪಥ ಮುಟ್ಟಲು ಸಾಧ್ಯ. ವಿದ್ಯಾರ್ಥಿಗಳಲ್ಲಿ ಶಿಸ್ತಿನ ಕೊರತೆಯು ತಮ್ಮ ಜೀವನದ ಅಪೂರ್ಣತೆಗೆ ಕಾರಣವಾಗುತ್ತದೆ. ಯಾವುದೇ ರೀತಿಯ ಪರಿಶ್ರಮ ಪಡದೆ ದೇವರನ್ನು ಬೇಡಿದರೆ ದೇವರು ಕೂಡ ಸಹಾಯ ಮಾಡುವುದಿಲ್ಲ. ಕಾಯಕವೇ ಕೈಲಾಸ ಎಂದು ತಿಳಿದು ಶ್ರಮ ಪಡಬೇಕು. ಕಲಿಕೆಯಲ್ಲಿ ಸಮಯ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರಾಮಚಂದ್ರ ಭಟ್ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿದ್ಯಾರ್ಥಿಗಳು ಕಟ್ಟುನಿಟ್ಟಾಗಿ ಅನುಸರಿಸಬೇಕಾದ ಕಾಲೇಜಿನ ನಿಯಮ ನಿಬಂಧನೆಗಳ ಬಗ್ಗೆ ವಿವರಿಸಿದರು.
ವೇದಿಕೆಯಲ್ಲಿ ದೀಪಿಕ ಎ. ನಾಯಕ್, ಯೋಗಗುರುಗಳಾದ ಯೋಗರತ್ನ ಗೋಪಾಲಕೃಷ್ಣ ದೇಲಂಪಾಡಿ,ವೇಳಾಪಟ್ಟಿ ಸಂಯೋಜಕರು ಪ್ರೊ.ಸುಬ್ರಹ್ಮಣ್ಯ ಉಡುಪ, ಎಐಸಿಇ ವಿಭಾಗದ ಸಂಯೋಜಕರಾದ ಪ್ರೊ.ಶ್ಯಾಮ್ ಪ್ರಸಾದ್, ಸಂಯೋಜಕರಾದ ಶ್ರೀ ಕರುಣಾಕರ ಬಳ್ಕೂರು, ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ಭೌತಶಾಸ್ತ್ರ ವಿಭಾಗದ ಉಪನ್ಯಾಸಕರಾದ ಶ್ರೀ ಪ್ರಸನ್ನಕುಮಾರ ಆರ್ ಹಾಗೂ ಇಂಗ್ಲಿಷ್ ವಿಭಾಗದ ಉಪನ್ಯಾಸಕಿ ತೆರೆಸಾ ವಿಲ್ಮಾ ಹಾಗೂ ಕಾರ್ಯಕ್ರಮದ ಸಂಯೋಜಕರಾದ ಶ್ರೀಮತಿ ಶ್ವೇತಾಕುಮಾರಿ ಹಾಗೂ ಇನ್ನಿತರರು ಉಪಸ್ಥಿತರಿದ್ದರು. ಉಪನ್ಯಾಸಕಿ ನೀಹಾ ಫ಼ಹೀಮ್ ಕಾರ್ಯಕ್ರಮ ನಿರೂಪಿಸಿದರು.