ಉಳ್ಳಾಲ, ಆ.14(DaijiworldNews/AA): ಟಾರ್ಗೆಟ್ ಇಲ್ಯಾಸ್ ಕೊಲೆಗೆ ಪ್ರತಿಕಾರವಾಗಿ ಕೊಲೆಯ ಪ್ರಮುಖ ಆರೋಪಿಯಾಗಿದ್ದ ಕಡಪ್ಪರ ಸಮೀರ್ ನನ್ನು ಹತ್ಯೆಗೈದ ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಸಮೀರ್ ನ ಹತ್ಯೆ ಪ್ರಕರಣದಲ್ಲಿ ಐವರು ಭಾಗಿಯಾಗಿದ್ದಾರೆ. ಕೊಲೆಯ ಪ್ರಮುಖ ರೂವಾರಿ ಹಾಗೂ ಇತರ ಸಹಚರರು ಸಮೀರ್ ಹತ್ಯೆ ಮಾಡಿರುವುದು ದೃಢಪಟ್ಟಿದೆ. ಇವರಲ್ಲಿ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದ್ದಾರೆ ಎನ್ನಲಾಗಿದೆ.
ಇನ್ನು ಇಲ್ಯಾಸ್ ಹತ್ಯೆಗೆ ಪ್ರತಿಕಾರವಾಗಿ ಈ ಹತ್ಯೆ ಮಾಡಲಾಗಿದೆ. ತಾಯಿಯೊಂದಿಗೆ ಸಮೀರ್ ಮನೆಗೆ ತೆರಳುವಾಗ ಆತನನ್ನು ಕಾರಿನಲ್ಲಿ ಬಂದಿದ್ದ ಅಪರಿಚಿತರ ತಂಡ ತಲವಾರಿನಿಂದ ಕಡಿದು ಹತ್ಯೆ ನಡೆಸಿದೆ.